Thursday, January 23, 2025
ಸುದ್ದಿ

ಮಂಗಳೂರಿನಲ್ಲಿ ಉಲ್ಬಣಗೊಂಡ ಡೆಂಘಿ; ಇಂದು 27 ಮಂದಿ ಜ್ವರದಿಂದ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಮಂಗಳೂರು: ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಜ್ವರದಿಂದ ಬಳಲಿತ್ತಿರುವವರ ಸಂಖ್ಯೆ ಏರಿಕೆಯಾಗಿತ್ತಲೇ ಇದೆ. ನಗರದ ಹೆಚ್ಚಿನ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯೂ ರೋಗಿಗಳ ಸಂಖ್ಯೆಯೇ ಹೆಚ್ಚಿದೆ.

ಇಂದು ಮಂಗಳೂರಿನಲ್ಲಿ 27 ಜನ ಡೆಂಗ್ಯೂ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡೆಂಗ್ಯೂ ನಿಯಂತ್ರಣಕ್ಕಾಗಿ ಮನೆಗಳಲ್ಲಿ ನೀರು ಸಂಗ್ರಹವಾಗದಂತೆ ಮತ್ತು ಸೊಳ್ಳೆಗಳ ನಿಯಂತ್ರಣಕ್ಕಾಗಿ ಜನರಲ್ಲಿ ಎಷ್ಟೇ ಮನವಿ ಮಾಡಿದರೂ ಅದನ್ನು ಗಣನೆಗೆಯೇ ತೆಗೆದುಕೊಳ್ಳುತ್ತಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದಕ್ಕಾಗಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆಯ ಜಂಟಿ ಆಶ್ರಯದಲ್ಲಿ ಈ ಹಿಂದೆ ಹಲವು ಡೆಂಗ್ಯೂ ಉತ್ಪನ್ನ ತಾಣಗಳಿಗೆ ಭೇಟಿ ನೀಡಿ ದಂಡ ವಿಧಿಸಲಾಗಿತ್ತು. ಈ ಹಿನ್ನಲೆಯಲ್ಲಿ ನಿನ್ನೆ ಮಂಗಳೂರಿನ ಕೊಡಿಯಾಲ್ ಬೈಲ್, ಮಣ್ಣಗುಡ್ಡ ಪ್ರದೇಶದ ಕಟ್ಟಡಗಳಿಗೆ ಭೇಟಿ ನೀಡಿದ ತಂಡಗಳು ಸೊಳ್ಳೆ ಬ್ರೆಡ್ಡಿಂಗ್ ಮತ್ತು ವಾಟರ್ ಲಾಗಿಂಗ್ಗಾಗಿ 50,000 ರೂ. ದಂಡ ವಿಧಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು