Wednesday, January 22, 2025
ಸುದ್ದಿ

ಬಹುಮತ ಇಲ್ಲದಿದ್ರೂ ಬಿಎಸ್ ವೈ ಸಿಎಂ ಗದ್ದುಗೆ ಏರೋದು ಪ್ರಜಾಪ್ರಭುತ್ವಕ್ಕೆ ಮಾರಕ: ಸಿದ್ದರಾಮಯ್ಯ- ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿಗೆ ಬಹುಮತ ಇಲ್ಲದಿದ್ದರೂ, ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಹೊರಟಿರುವುದು ಮತ್ತು ಅವರ ತರಾತುರಿಯ ನಿರ್ಧಾರವನ್ನು ರಾಜ್ಯಪಾಲರು ಒಪ್ಪಿರುವುದು ಎರಡೂ ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಬೆಳವಣಿಗೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಆತಂಕ ವ್ಯಕ್ತಪಡಿಸಿದ್ದಾರೆ. ಸಂವಿಧಾನದ ಮೇಲೆ ಬಿಜೆಪಿಗೆ ನಂಬಿಕೆ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ.

ಬಿಜೆಪಿ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಬಿಎಸ್ ಯಡಿಯೂರಪ್ಪ ಇಂದು ರಾಜ್ಯಪಾಲ ವಜೂಭಾಯ್ ವಾಲಾ ಅವರನ್ನು ಭೇಟಿಯಾಗಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಸಮಯ ನಿಗದಿಪಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಇಂದು ಸಂಜೆ 6 ಗಂಟೆಗೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು