Wednesday, January 22, 2025
ಸುದ್ದಿ

ಪ್ರಮಾನವಚನ ಮೊದಲೇ ಬಿಎಸ್‍ವೈ ಪರ್ವ ಆರಂಭ – ಕುಮಾರಸ್ವಾಮಿ ವರ್ಗಾವಣೆ ಆದೇಶಕ್ಕೆ ಬ್ರೇಕ್.. – ಕಹಳೆ ನ್ಯೂಸ್

ಬೆಂಗಳೂರು : ಯಡಿಯೂರಪ್ಪ ಇನ್ನು ಸಿಎಂ ಆಗಿ ಪ್ರಮಾಣವಚನಕ್ಕೆ ಕೆಲವು ಗಂಟೆಗಳು ಬಾಕಿ ಇರುವಾಗಲೇ ತಮ್ಮ ಪರ್ವ ಆರಂಭಿಸಿದ್ದಾರೆ. ಜುಲೈ ತಿಂಗಳಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅನುಮೋದನೆಗೊಂಡಿದ್ದ ಎಲ್ಲಾ ಹೊಸ ಕಾಮಗಾರಿಗಳನ್ನು ಹಾಗೂ ವರ್ಗಾವಣೆಯನ್ನು ತಕ್ಷಣ ತಡೆಹಿಡಿಯುವಂತೆ ಬಿಎಸ್‍ವೈ ಆದೇಶಿಸಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ಭಾಸ್ಕರ್ ಎಲ್ಲಾ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ನೀಡಿದ ಸೂಚನೆಯಂತೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಆಗಿರುವ ಕಾಮಗಾರಿ ಮತ್ತು ವರ್ಗಾವಣೆಗಳಿಗೆ ಸಂಬಂಧಿಸಿದಂತೆ ನಿರ್ದೇಶನ ನೀಡಿರುವ ಮುಖ್ಯ ಕಾರ್ಯದರ್ಶಿಗಳು ಮುಂದಿನ ಪರಿಶೀಲನೆ ಆಗುವವರೆಗೂ ಆದೇಶಗಳನ್ನು ತಡೆಹಿಡಿಯುವಂತೆ ನಿರ್ದೇಶನ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೆ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಅನುಮೋದನೆಗೊಂಡು ಜಾರಿಯಾಗದೆ ಇರುವ ಆದೇಶಗಳನ್ನು ಕೂಡ ಚಾಲನೆಗೊಳಿಸದಂತೆ ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವರ್ಗಾವಣೆಗೆ ಸಂಬಂಧಿಸಿದ ಪ್ರಸ್ತಾವನೆಗಳ ಮೇಲೆ ಅನುಮೋದನೆಗೊಂಡು ಜಾರಿಯಾಗದೆ ಉಳಿದಿರುವ ಆದೇಶಗಳನ್ನು ಮುಂದಿನ ಆದೇಶದವರೆಗೂ ಜಾರಿ ಮಾಡದಂತೆ ಹಾಗೂ ಈಗಾಗಲೇ ಆದೇಶ ಹೊರಡಿಸಿದ್ದು, ಚಾಲನೆಗೊಳ್ಳದಿರುವ ವರ್ಗಾವಣೆ ಸಂಬಂಧಿಸಿದ ಪ್ರಸ್ತಾವನೆ ಮೇಲಿನ ಆದೇಶಗಳನ್ನು ಕೂಡ ಮುಂದಿನ ಆದೇಶದವರೆಗೂ ಚಾಲನೆಗೊಳಿಸದಂತೆ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿಗಳು ಸೂಚಿಸಿದ್ದಾರೆ.