Wednesday, November 27, 2024
ಸುದ್ದಿ

ಮಲೆನಾಡು, ಕೊಡಗಿನಲ್ಲಿ ಧಾರಾಕಾರ ಮಳೆ: ತುಂಬಿದ ಜಲಾಶಯಗಳು – ಕಹಳೆ ನ್ಯೂಸ್

ಚಿಕ್ಕಮಗಳೂರು/ಕೊಡಗು: ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಡಗು, ಮೈಸೂರು ಮತ್ತು ಮಂಡ್ಯದಲ್ಲಿ ಜಲಾಶಯಗಳು ಭರ್ತಿಯಾಗುತ್ತಿವೆ. ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿ ಜಲಾಶಯ ಕೂಡ ಬಹುತೇಕ ತುಂಬಿಹೋಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಲೆನಾಡು ಮತ್ತು ಕೊಡಗು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಿನ್ನೆ ರಾತ್ರಿಯಿಂದಲೂ ಮಳೆ ಎಡೆಬಿಡದೆ ಸುರಿಯುತ್ತಿದೆ. ಕಳೆದೊಂದು ವಾರದಿಂದ ಕಾಫಿನಾಡಿನಲ್ಲಿ ಇಳಿಮುಖವಾಗಿದ್ದ ಮಳೆ ಮತ್ತೆ ಆರ್ಭಟಿಸುತ್ತಿದೆ. ಭಾರೀ ಮಳೆಯಿಂದಾಗಿ ಇಲ್ಲಿಯ ಜನಜೀವನ ಅಸ್ತವ್ಯಸ್ತವಾದರೂ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಎಲ್ಲಕ್ಕಿಂತ ಹೆಚ್ಚಾಗಿ ಮಲೆನಾಡಿನ ನದಿಗಳಿಗೆ ಜೀವ ಕಳೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚಿಕ್ಕಮಗಳೂರಿನ ಕುದುರೆಮುಖ, ಕೆರೆಕಟ್ಟೆ, ಶೃಂಗೇರಿ, ಮೂಡಿಗೆರೆ, ಕೊಪ್ಪ ಮತ್ತು ಎನ್.ಆರ್. ಪುರದಲ್ಲಿ ಒಳ್ಳೆಯ ಮಳೆಯಾಗುತ್ತಿದೆ. ಇದರಿಂದಾಗಿ ತುಂಗ, ಭದ್ರ, ಹೇಮಾವತಿ ನದಿಗಳಿಗೆ ಒಳಹರಿವು ಹೆಚ್ಛಾಗುತ್ತಿದ್ದು ಈ ನದಿಗಳು ಮೈದುಂಬಿ ಹರಿಯುತ್ತಿವೆ.

ಕೊಡಗು ಜಿಲ್ಲೆಯಾದ್ಯಂತವೂ ಇವತ್ತು ಬೆಳಗ್ಗೆಯಿಂದ ಮಳೆಯಾಗುತ್ತಿದೆ. ಬ್ರಹ್ಮಗಿರಿ, ಪುಷ್ಪಗಿರಿ ತಪ್ಪಲಲ್ಲಿ ಉತ್ತಮ ಮಳೆಯಾಗಿದ್ದು, ಕಾವೇರಿ ನದಿಯಲ್ಲಿ ನೀರಿನ ಒಳಹರಿವ ಹೆಚ್ಚಾಗಿದೆ. ಕೊಡಗಿನ ಹಾರಂಗಿ ಜಲಾಶಯ ಬಹುತೇಕ ಭರ್ತಿಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಲಾಶಯಕ್ಕೆ ನೀರಿನ ಒಳಹರಿವಿನ ಪ್ರಮಾಣ ತುಸು ಹೆಚ್ಚಿದೆ. ಹಾಗೆಯೇ ಕೆಆರ್ ಸಾಗರ ಮತ್ತು ಕಬಿನಿ ಜಲಾಶಯಗಳೂ ಭರ್ತಿಯಾಗುತ್ತಿವೆ.

ಇನ್ನು, ಮಹಾರಾಷ್ಟ್ರ ಭಾಗದಲ್ಲಿ ಮಳೆ ಚೆನ್ನಾಗಿ ಆಗುತ್ತಿರುವುದರಿಂದ ವಿಜಯಪುರದ ಆಲಮಟ್ಟಿ ಜಲಾಶಯ ಕೂಡ ತುಂಬುತ್ತಿದೆ.