Thursday, January 23, 2025
ಸುದ್ದಿ

ಅರಳಿದ ಕಮಲ: ಸಂಭ್ರಮಾಚರಣೆ – ಕಹಳೆ ನ್ಯೂಸ್

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮುಖ್ಯಮುಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರ ಸೇರಿದಂತೆ ಜಿಲ್ಲಾದ್ಯಂತ ಸಂಭ್ರಮಾಚರಿಸಿದರು.
ಬಿಎಸ್‍ವೈ ಅಧಿಕಾರ ಸ್ವೀಕರಿಸುತ್ತಿದ್ದಂತೆ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಬಿಜೆಪಿಯ ಹಿರಿಯ ಮುಖಂಡರ ಸಮ್ಮುಖದಲ್ಲಿ ಸೇರಿದ್ದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಬಿಜೆಪಿಗೆ ಜಯವಾಗಲಿ, ಯಡಿಯೂರಪ್ಪನವರಿಗೆ ಜಯವಾಗಲಿ ಎಂದು ಘೋಷಣೆ ಕೂಗಿ ಕುಣಿದು ಕುಪ್ಪಳಿಸಿ ಸಂಭ್ರಮಾಚಿಸಿದರು.

ನಾಲ್ಕನೇ ಬಾರಿಗೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಲಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ರೈತರು, ಜನಪರ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದರು. ಮುಂದೆ ಕೂಡ ಯಡಿಯೂರಪ್ಪನವರು ಉತ್ತಮ ಕೆಲಸಗಳನ್ನು ಮಾಡಲಿದ್ದಾರೆ ಎಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು