Saturday, February 1, 2025
ರಾಜಕೀಯ

ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಜೆಡಿಎಸ್‍ನ ಶಾಸಕರ ಒಲವು – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡುವ ಸಂಬಂಧ ಜೆಡಿಎಸ್‍ನ ಕೆಲವು ಶಾಸಕರು ಒಲವು ತೋರಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕೆಲವು ಶಾಸಕರು ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡುವುದು ಸೂಕ್ತ ಎಂದು ಹೇಳಿದರು.

ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಹಿರಿಯ ಶಾಸಕ ಜಿ.ಟಿ.ದೇವೇಗೌಡ, ಸಭೆಯಲ್ಲಿ ಕೆಲವು ಶಾಸಕರು ಬಿಜೆಪಿಗೆ ಬೆಂಬಲ ನೀಡುವ ಪರ ಮಾತನಾಡಿದರೆ, ಇನ್ನು ಕೆಲವರು ಪ್ರತಿಪಕ್ಷದಲ್ಲಿ ಕುಳಿತು ಪಕ್ಷದ ಸಂಘಟನೆ ಮಾಡುವುದು ಸೂಕ್ತ ಎಂಬುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಎರಡೂ ವಿಷಯಗಳ ಬಗ್ಗೆ

ಜಾಹೀರಾತು
ಜಾಹೀರಾತು
ಜಾಹೀರಾತು

ಎಚ್.ಡಿ.ಕುಮಾರಸ್ವಾಮಿಯವರೇ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರು ತೆಗೆದುಕೊಳ್ಳುವ ತಿರ್ಮಾನವನ್ನು ಎಲ್ಲರು ಒಪ್ಪಿಕೊಳ್ಳುತ್ತೆವೆ ಎಂದು ಅವರು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು