ಬೆಂಗಳೂರು: ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಿ.ಎಸ್.ಯಡಿಯೂರಪ್ಪ ರೈತರು ಮತ್ತು ನೇಕಾರರಿಗೆ ಕೊಡುಗೆಯನ್ನು ನೀಡಿದ್ದಾರೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಪೂರಕವಾಗಿ ಪ್ರತಿ ರೈತರಿಗೂ ಎರಡು ಕಂತುಗಳಲ್ಲಿ 4,000 ನೀಡಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ.
ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಅಲ್ಲಿಂದ ನೇರವಾಗಿ ವಿಧಾನಸೌಧಕ್ಕೆ ಬಂದ ಅವರು, ಸಚಿವ ಸಂಪುಟ ಸಭೆ ನಡೆಸಿ ಈ ತೀರ್ಮಾನ ತೆಗೆದುಕೊಂಡರು.
ರೈತರಿಗೆ ರಾಜ್ಯ ಸರ್ಕಾರದಿಂದ ನೆರವು ನೀಡಲು ಕೈಗೊಂಡಿರುವ ಈ ನಿರ್ಧಾರದಿಂದ ಕೇಂದ್ರದ 6,000 ಸೇರಿ ವರ್ಷಕ್ಕೆ 10,000 ಸಿಗಲಿದೆ.