Monday, January 27, 2025
ಸುದ್ದಿ

ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ವಿಧಿವಶ – ಕಹಳೆ ನ್ಯೂಸ್

ಬಂಟ್ವಾಳ: ಶ್ರೇಷ್ಠ ಸಾಹಿತಿ, ಜಾನಪದ ತಜ್ಞ, ಧಾರ್ಮಿಕ, ಸಾಮಾಜಿಕ ಧುರೀಣ, ಸಹಕಾರಿ ರಂಗದ ನೇತಾರ, ಅಸಾಮಾನ್ಯ ಸಂಘಟಕ, ನಿತ್ಯ ಕಾರ್ಯಶೀಲ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ (94) ಶನಿವಾರ ಬಂಟ್ವಾಳ ಮೊಡಂಕಾಪುವಿನ ಸಾಕೇತ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

1926ರ ಮಾರ್ಚ್ ತಿಂಗಳಲ್ಲಿ ಜನಿಸಿದ ಏರ್ಯ ಅವರು ಹೈಸ್ಕೂಲ್ ಶಿಕ್ಷಣ ಮುಗಿಸುವ ಮೊದಲೇ ಗಾಂಧೀಜಿ ಮತ್ತು ಕಾರ್ನಾಡು ಸದಾಶಿವ ರಾವ್ ಅವರಿಂದ ಪ್ರೇರಿತರಾಗಿ ರಾಷ್ಟ್ರಸೇವಾ ರಂಗಕ್ಕೆ ಧುಮುಕಿದರು. ಇನ್ನೂ ಎಳೆಯ ಪ್ರಾಯದಲ್ಲೆ ಹರಿಜನರ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು ಹಾಗೂ ಅವರಿಗೆ ಸಮಾಜದಲ್ಲಿ ಸ್ಥಾನಮಾನ ದೊರಕಿಸಿಕೊಡುವಲ್ಲಿ ಹೋರಾಡಿದ್ದರು. ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರಿಂದ ಪ್ರಭಾವಿತರಾದ ಆಳ್ವರು ಆ ಕ್ಷೇತ್ರದಲ್ಲೂ ಅಸಾಮಾನ್ಯವಾದ ಕಾರ್ಯ ನಿರ್ವಹಿಸಿದ್ದಾರೆ. ಅವರು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿಯೂ ಕ್ಷಮತೆಯಿಂದ ಕಾರ್ಯ ನಿರ್ವಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಶ್ವ ಹಿಂದೂ ಪರಿಷತ್‍ನ ಕರ್ನಾಟಕ ಘಟಕದ ಅಧ್ಯಕ್ಷರಾಗಿದ್ದ ಇವರು ಅಖಿಲ ಕರ್ನಾಟಕ ಜಾನಪದ ಪರಿಷತ್‍ನ ವಿಶ್ವಸ್ತರಾಗಿಯೂ ಸೇವೆ ಸಲ್ಲಿಸಿದ್ದರು. ಹಲವು ಕ್ಷೇತ್ರಗಳಲ್ಲಿ ಇವರು ಸಲ್ಲಿಸಿದ್ದ ಸೇವೆಯನ್ನು ಪರಿಗಣಿಸಿ ರಾಜ್ಯದ ಅನೇಕ ಸಂಸ್ಥೆಗಳು ಅವರನ್ನು ಸಮ್ಮಾನಿಸಿವೆ. ಕೆಲವು ವರ್ಷಗಳ ಹಿಂದೆ ಅವರ ಅಭಿಮಾನಿಗಳು ಸೇರಿ ‘ಏರ್ಯ’ ಎಂಬ ಅಭಿನಂದನ ಗ್ರಂಥವನ್ನೂ ಸಮರ್ಪಣೆ ಮಾಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

1969ರ ಜನವರಿಯಲ್ಲಿ ಏರ್ಯ ಲಕ್ಷ್ಮೀನಾರಾಯಣ ಅವರು 2ನೇ ಅಖೀಲ ಕರ್ನಾಟಕ ಜಾನಪದ ಸಮ್ಮೇಳನದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಏರ್ಯ ಲಕ್ಷ್ಮೀನಾರಾಯಣ ಆಳ್ವ ಸಾಕಷ್ಟು ಮಂದಿಗೆ ಮೆಚ್ಚುಗೆಯಾಗಿದ್ದರು.
ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ ಮಾಡಿದ್ದ ಆಳ್ವ ಅವರು ಬರೆದ ರಾಮಾಶ್ವಮೇಧ ತರಂಗಗಳು 1959ರಲ್ಲಿ ಪ್ರಕಟವಾಗಿದ್ದು, ಈ ಕೃತಿ ಅಂದಿನ ಮೈಸೂರು ಹಾಗೂ ಮದ್ರಾಸ್ ವಿಶ್ವವಿದ್ಯಾಲಯಗಳಲ್ಲಿ ಪಠ್ಯಪುಸ್ತಕವಾಗಿ ಆಯ್ಕೆಯಾಗಿತ್ತು. ಸ್ನೇಹಸೇತು-ಪತ್ರರೂಪದ ಕಾದಂಬರಿ, ಜೀವನ ಚಿತ್ರ-ಮುಳಿಯ ತಿಮ್ಮಪ್ಪಯ್ಯನವರ ಕುರಿತು; ಕೃತಿ ವಿಮರ್ಶೆ-ನಾಗೇಗೌಡರ ಸ್ವಾಗತ ಗೀತೆ, ಇತರ-ಮೊದಲ ಮಳೆ, ಸಂಚಯ, ಓರಗೆಗೆ ಒಲವಿನ ಒಸಗೆ ಮುಂತಾದವು. ತುಳುನಾಡಿನ ಭೂತಾರಾಧನೆಯ ಕುರಿತಾದ ಸಮಗ್ರ ಅಧ್ಯಯನ ಗ್ರಂಥ ಮಂಗಳ ತಿಮರು’. ಕೌಟುಂಬಿಕ ಪರಿಚಯದ ನೂರರ ನೆನಪು.’ ಸಂಪಾದಿತ ಗ್ರಂಥ-ಗಾನ ಕೋಗಿಲೆ’ ಯಕ್ಷ ಗಾನ ಭಾಗವತ ದಾಮೋದರ ಮಂಡೆಚ್ಚರ ಸಂಸ್ಮರಣ ಗ್ರಂಥ ಇವು ಆಳ್ವ ಅವರ ಪ್ರಮುಖ ಕೃತಿಗಳಾಗಿದೆ.

ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷ, ಕಾಸರಗೋಡು ಸಾಹಿತ್ಯ ಸಮ್ಮೇಳನಾಧ್ಯಕ್ಷ ತೆ, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷ,ಮಂಗಳೂರು ವಿವಿ ಗೌರವ ಡಾಕ್ಟರೇಟ್, ಬಂಟರ ಸಂಘದ ಅಮೃತ ಮಹೋತ್ಸವ, ತುಳು ಸಾಹಿತ್ಯ ಅಕಾಡೆಮಿ ಗೌರವ, ಸಾಹಿತ್ಯ ಸಮ್ಮೇಳನ, ಕೆನರಾ ಜೂನಿಯರ್ ಕಾಲೇಜು ಬೆಳ್ಳಿಹಬ್ಬ, ಬಂಟರ ಸಂಘದ ಅಮೃತ ಮಹೋತ್ಸವ, ತುಳು ಸಾಹಿತ್ಯ ಅಕಾಡೆಮಿಗೌರವ ಸೇರಿ ಅನೇಕ ಪ್ರಶಸ್ತಿ, ಗೌರವಗಳಿಗೆ ಆಳ್ವ ಪಾತ್ರರಾಗಿದ್ದರು.