ಅಡ್ಯನಡ್ಕ: ಯುವ ಬ್ರಿಗೇಡ್ ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನ, ಅಡ್ಯನಡ್ಕ ವತಿಯಿಂದ ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ ಹಾಗೂ ನೋಟ್ ಪ್ಯಾಡ್ ಮ್ಯಾನ್ ಕಾರ್ಯಕ್ರಮವು ಪ್ರಾಂಶುಪಾಲ ಡಿ. ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಜರುಗಿತು.
ನಿವೃತ್ತ ಸೈನಿಕರಾದ ಹರೀಶ್ ಡಿ. ಶೆಟ್ಟಿ ಹಾಗೂ ನಾರಾಯಣ ಪುರುಷ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಭಾರತೀಯ ಸೇನೆಯ ಸಾಹಸ, ಸಾಧನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅವರನ್ನು ಸ್ಮರಣಿಕೆಯಿತ್ತು ಸನ್ಮಾನಿಸಲಾಯಿತು.
ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ. ಆರ್.ನಾಯ್ಕ್ ಮಾತನಾಡಿದರು. ಯುವ ಬ್ರಿಗೇಡ್ ನಡೆಸುತ್ತಿರುವ ನೋಟ್ ಪ್ಯಾಡ್ ಮ್ಯಾನ್ ಯೋಜನೆಯನ್ವಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಎಸ್ಸೆಸ್ಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಪಂಚಮಿಕುಮಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದು, ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ವಿದ್ಯಾರ್ಥಿನಿ ಪದ್ಮಾವತಿ ಸ್ವಾಗತಿಸಿ, ಹಿರಿಯ ಶಿಕ್ಷಕರಾದ ಎಸ್. ರಾಜಗೋಪಾಲ ಜೋಶಿ ಕಾರ್ಯಕ್ರಮ ನಿರೂಪಿಸಿ, ಅರ್ಥಶಾಸ್ತ್ರ ಉಪನ್ಯಾಸಕಿ ವೀಣಾ ಟಿ. ವಂದಿಸಿದರು. ಯುವ ಬ್ರಿಗೇಡ್ ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನದ ಕಾರ್ಯಕರ್ತರು, ಸಂಸ್ಥೆಯ ಸಿಬ್ಬಂದಿಗಳು ಹಾಗೂ ಎಲ್ಲಾ ವಿದ್ಯಾರ್ಥಿಗಳು ಹಾಜರಿದ್ದರು.