Thursday, January 23, 2025
ಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ವೃತ್ತಿತರಬೇತಿ ಕಾರ್ಯಾಗಾರ; ವಿದ್ಯಾರ್ಥಿಗಳಿಗೆ ಉದ್ಯೋಗ ಮಾಹಿತಿಯನ್ನು ನೀಡಬೇಕು: ಡಾ. ಬಿ.ಎನ್. ಶಾಂತಪ್ರಿಯ – ಕಹಳೆ ನ್ಯೂಸ್

ಪುತ್ತೂರು: ಇಂದು ಯುವ ಸಮುದಾಯವು ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿದೆ. ಇದಕ್ಕೆ ಮುಖ್ಯ ಕಾರಣ ಉದ್ಯೋಗದ ಮಾಹಿತಿಯ ಕೊರತೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉದ್ಯೋಗದ ಬಗೆಗಿನ ಕೌಶಲ್ಯ ವೃದ್ಧಿಸುವ ಕೆಲಸ ಅತ್ಯಗತ್ಯ. ಇದರೊಂದಿಗೆ ಎಲ್ಲಾ ವಿಚಾರಗಳಲ್ಲಿ ಕುತೂಹಲ ಹೊಂದಿರುವುದು ಅತೀ ಮುಖ್ಯವಾಗಿರುತ್ತದೆ. ಹಾಗಾದಾಗ ಮಾತ್ರ ಮಾಹಿತಿಯನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಉಡುಪಿಯ ಸದ್ಗುರು ಅಭಿವೃದ್ಧಿ ಕೇಂದ್ರದ ಅಧ್ಯಕ್ಷ ಡಾ.ಬಿ.ಎನ್. ಶಾಂತಪ್ರಿಯ ಹೇಳಿದರು.

ಅವರು ಇಲ್ಲಿನ ವಿವೇಕಾನಂದ ಕಾಲೇಜಿನ ಉದ್ಯೋಗ ಮತ್ತು ತರಬೇತಿ ಘಟಕ, ಐ.ಕ್ಯು.ಎ.ಸಿ.ಘಟಕ, ಪೊಲಿಟಿಕಲ್ ಫೋರಮ್ ಹಾಗೂ ಇತಿಹಾಸ ಮತ್ತು ಪಾರಂಪರಿಕ ಕೂಟದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಅಂತಿಮ ಕಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಗಿಸಲಾಗಿದ್ದ ವೃತ್ತಿ ಮತ್ತು ತರಬೇತಿ ವಿಷಯದ ಬಗೆಗಿನ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಶನಿವಾರ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಭಾರತದಲ್ಲಿ ಉದ್ಯೋಗ ಸಮಸ್ಯೆಗಿಂತ ಹೆಚ್ಚು ಮಾಹಿತಿ ಕೊರತೆಯ ಸಮಸ್ಯೆ ಇದೆ. ಈ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಿನಗಮನಹರಿಸಬೇಕೆಂದು ಹೇಳಿದರು. ಬಳಿಕ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ಶಂಕರನಾರಾಯಣ ಭಟ್, ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಇಂತಹ ತರಬೇತಿಗಳು ವಿದ್ಯಾರ್ಥಿಗಳನ್ನು ಭವಿಷ್ಯದಲ್ಲಿ ಉತ್ತಮ ನಾಗರಿಕರನ್ನಾಗಿ ಪರಿವರ್ತಿಸುವಂತೆ ಮಾಡುತ್ತದೆ ಎಂದರು.
ಕಾಲೇಜಿನ ಐ.ಕ್ಯು.ಎ.ಸಿ.ಘಟಕದ ಸಂಯೋಜಕ ಡಾ. ಹೆಚ್.ಜಿ. ಶ್ರೀಧರ್ ಪ್ರಸ್ಥಾವನೆಗೈದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ವಿದ್ಯಾರ್ಥಿನಿ ಮಾನಸ ಪ್ರಾರ್ಥಿಸಿದರು. ಪೊಲಿಟಿಕಲ್ ಫೋರಮ್‍ನ ಸಂಯೋಜಕಿ ಅನಿತಾ ಕಾಮತ್ ಸ್ವಾಗತಿಸಿದರು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ್ ನಾಯಕ್ ವಂದಿಸಿದರು. ವಿದ್ಯಾರ್ಥಿ ಭೋಧನ್ ಕಾರ್ಯಕ್ರಮ ನಿರೂಪಿಸಿದರು.