ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ನಂತರ ಮತ್ತೆ ದೋಸ್ತಿ ಸರಕಾರ ಮುಂದುವರಿಯುವುದೇ ಎಂದು ಎಲ್ಲರನ್ನು ಕಾಡಿದ್ದ ಪ್ರಶ್ನೆ ಆಗಿತ್ತು. ಆದರೆ ಈಗ ಜೆಡಿಎಸ್ ವರಿಷ್ಠ ಆ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾಗಲಿದ್ದಾರೆ ಎಂದು ದೇವೇಗೌಡರು ತಿಳಿಸಿದ್ದಾರೆ.
ಕಾಂಗ್ರೆಸ್ 2ನೇ ಅತಿ ದೊಡ್ಡ ಪಕ್ಷವಾಗಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿರುತ್ತಾರೆ. ಕೇಂದ್ರದ ನಾಯಕರ ಜೊತೆ ಚರ್ಚಿಸಿ ಕಾಂಗ್ರೆಸ್ ಮೈತ್ರಿ ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಒಪ್ಪಿಗೆ ಮೇರೆಗೆ ಕುಮಾರಸ್ವಾಮಿ ಅವರನ್ನು ಸಿಎಂ ಮಾಡಲಾಗಿತ್ತು. ಕಾಂಗ್ರೆಸ್ ಹೈಕಮಾಂಡ್ ಮೈತ್ರಿ ಮುಂದುವರಿಸುವ ಬಗ್ಗೆ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
ಮೈತ್ರಿ ಸರ್ಕಾರದಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಸ್ಥಾನಮಾನ ನೀಡಲು ಸಾಧ್ಯವಾಗಲಿಲ್ಲ. ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದೇನೆ, ಅವರಲ್ಲಿ ಕ್ಷಮೆ ಕೇಳುತ್ತೇನೆ ಎಂದು ದೇವಗೌಡರು ಹೇಳಿದ್ದಾರೆ.