ಬೆಂಗಳೂರು: ಇಂದಿರಾ ಕ್ಯಾಂಟೀನ್‍ಗಳಿಗೆ ಅನ್ನಪೂರ್ಣ ಕ್ಯಾಂಟೀನ್ ಎಂದು ಹೆಸರು ಬದಲಾಯಸುವ ನಿರ್ಧಾರದವನ್ನು ಬಿಜೆಪಿ ಶಾಸಕ ಸಿಟಿ ರವಿ ನೀಡಿದ್ದಾರೆ.
ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಮಾತನಾಡಿದ ಅವರು ಮೈತ್ರಿ ಅವಧಿಯಲ್ಲಿ ಕೆಲವು ರಾಜಕೀಯ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ. ಹೀಗಾಗಿ ನಾವು ಕೂಡ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಕ್ಯಾಬಿನೆಟ್ ಸಭೆಯಲ್ಲಿ ಕೆಲವೊಂದು ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಮೈತ್ರಿ ಸರ್ಕಾರದ ಎಲ್ಲಾ ಯೋಜನೆಗಳನ್ನು ಕೈ ಬಿಡಲು ಬರಲ್ಲ, ಹಾಗೇ ಎಲ್ಲಾ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗಲು ಸಾಧ್ಯವಿಲ್ಲ. ಈ ಸಂಬಂಧ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.