Wednesday, January 22, 2025
ಸುದ್ದಿ

ಕಾಶ್ಮೀರದಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ – ಕಹಳೆ ನ್ಯೂಸ್

ನವದೆಹಲಿ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಭಾರಿ ದಾಳಿ ನಡೆಸಲು ಪಾಕಿಸ್ತಾನ ಮೂಲದ ಉಗ್ರಗಾಮಿ ಗುಂಪುಗಳು ಸಂಚು ರೂಪಿಸುವೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಉಗ್ರರಿಗೆ ಪ್ರತ್ಯುತ್ತರ ನೀಡುವ ಸಲುವಾಗಿ ಹೆಚ್ಚುವರಿ ಸೈನಿಕರನ್ನು ನಿಯೋಜಿಸಲಾಗಿದೆ.

ಉಗ್ರರ ದಾಳಿ ಬಗ್ಗೆ ಮಾಹಿತಿ ಪಡೆದ ನಂತರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕಾಶ್ಮೀರ ಕಣಿವೆಯಲ್ಲಿ ಪರಿಸ್ಥಿತಿಯ ಪರಾಮರ್ಶೆ ಬಳಿಕ ಅಲ್ಲಿಗೆ ಹೆಚ್ಚುವರಿ ಸೈನಿಕರ ನಿಯೋಜನೆ ಅಗತ್ಯ ಎಂಬುದು ಸರ್ಕಾರಕ್ಕೆ ಮನವರಿಕೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪಾಕಿಸ್ತಾನ ಮೂಲದ ಉಗ್ರರಿಂದ ನಡೆಯಬಹುದಾದ ಸಂಭಾವ್ಯ ದಾಳಿಗೆ ಪ್ರತಿದಾಳಿ ನಡೆಸುವ ನಿಟ್ಟಿನಲ್ಲಿ 100 ಅರಸೇನಾ ಪಡೆ ತುಕಡಿಗಳನ್ನು ನಿಯೋಜಿಸಲಾಗಿದೆ. ಅಜಿತ್ ದೋವಲ್ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು