Tuesday, January 21, 2025
ರಾಜಕೀಯ

ಬಿಎಸ್‍ವೈಯಿಂದ ರೈತರಿಗೆ ಭರ್ಜರಿ ಕೊಡುಗೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿ, ಇಂದು ಸದನದಲ್ಲಿ ವಿಶ್ವಾಸಮತ ಯಾಚನೆ ಮಂಡಿಸಿದರು. ಈ ವೇಳೆ ಮಾತನಾಡಿದ ಅವರು, ರೈತರಿಗೆ ಬಂಪರ್ ಕೊಡುಗೆಯನ್ನು ಘೋಷಿಸಿದ್ದಾರೆ.

ವಿಶ್ವಾಸ ನಿರ್ಣಯ ಮಂಡಿಸಿದ ಬಳಿಕ ಮಾತನಾಡಿದ ಸಿಎಂ ಬಿಎಸ್‍ವೈ, ಜನಪರ ಆಡಳಿತ ನಡೆಸುವುದು ನಮ್ಮ ಗುರಿ. ಯಾವುದೇ ಕಾರಣಕ್ಕೂ ಸೇಡಿನ ರಾಜಕಾರಣ ಮಾಡುವುದಿಲ್ಲ. ಎಲ್ಲ ಮರೆತು ವಿಪಕ್ಷವನ್ನು ಗಣನೆಗೆ ತೆಗೆದುಕೊಂಡು ಸಹಬಾಳ್ವೆಯಿಂದ ಆಡಳಿತ ನಡೆಸುತ್ತೇನೆ ಎಂಬ ಭರವಸೆಯನ್ನು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ. ಇನ್ನು 4 ಅಥವಾ 5 ತಿಂಗಳಲ್ಲಿ ಈ ಆಡಳಿತವನ್ನು ಸರಿ ದಾರಿಗೆ ತರುವುದು ನಮ್ಮ ಮೊದಲ ಗುರಿ ಆಗಿದೆ. ರಾಜ್ಯದಲ್ಲಿ ಮಳೆಯಿಲ್ಲದೇ ಜನರು ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಇದರ ನಿಯಂತ್ರಣಕ್ಕೆ ನಮ್ಮ ಸರ್ಕಾರ ಕೆಲಸ ಮಾಡಲಿದೆ. ರೈತರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ವಾರ್ಷಿಕವಾಗಿ 6000 ರೂ ಹಣ ನೀಡುವಂತೆ, ರಾಜ್ಯ ಸರ್ಕಾರದಿಂದ ರೈತರಿಗೆ 4000 ರೂವನ್ನು ವಾರ್ಷಿಕವಾಗಿ ಎರಡು ಕಂತುಗಳಲ್ಲಿ ನೀಡಲಾಗುವುದು ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು