Thursday, January 23, 2025
ರಾಜಕೀಯ

ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಕುಮಾರ್ – ಕಹಳೆ ನ್ಯೂಸ್

ಬೆಂಗಳೂರು: ಸ್ಪೀಕರ್ ಜವಾಬ್ದಾರಿಯಿಂದ ಬಿಡುಗಡೆಗೊಳ್ಳಬೇಕೆಂದು ಬಯಸಿದ್ದೇನೆ. ಕಳೆದ 14 ತಿಂಗಳ ಕಾಲ ಈ ಸ್ಥಾನವನ್ನು ಜವಾಬ್ದಾರಿಯಿಂದ ನಿಭಾಯಿಸಿದ್ದೇನೆ. ನಿಮಗೆಲ್ಲರಿಗೂ ವಂದಿಸಿ, ರಾಜೀನಾಮೆ ಪತ್ರ ನೀಡುತ್ತಿದ್ದೇನೆ ಎಂದು ರಮೇಶ್ ಕುಮಾರ್ ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ.

“ನಾನು ಯಾರ ಒತ್ತಡಕ್ಕೂ ಮಣಿದು ಕೆಲಸ ಮಾಡುವವನಲ್ಲ. ನಾನು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ್ದೇನೆ. ನನಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. 2018ರ ಚುನಾವಣೆ ಫಲಿತಾಂಶದ ನಂತರ ನನಗೆ ಸ್ವೀಕರ್ ಸ್ಥಾನ ವಹಿಸಿಕೊಳ್ಳುವಂತೆ ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಸೂಚಿಸಿದ್ದರು. ಸಿದ್ದರಾಮಯ್ಯ ಅವರು ನಾನೇ ಈ ಸ್ಥಾನ ಅಲಂಕರಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಆಡಳಿತ ಪಕ್ಷ ಸೇರಿ ಎಲ್ಲರೂ ನನ್ನನ್ನು ವಿಧಾನಸಭಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದರು” ಎಂದು ರಮೇಶ್ ಕುಮಾರ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು