Tuesday, January 21, 2025
ಸುದ್ದಿ

ವಿವೇಕಾನಂದ ಕಾಲೇಜು: ರಕ್ಷಕ-ಶಿಕ್ಷಕ ಸಂಘದ ಸಭೆ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಸಭೆ ಕಾಲೇಜಿನ ಕೇಶವ ಸಂಕಲ್ಪ ಸಭಾಂಗಣದಲ್ಲಿ ಸೋಮವಾರ ನಡೆಯಿತು.

ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಕಾಲೇಜಿನಲ್ಲಿ ಕೆಲವೊಂದು ಬದಲಾವಣೆಯನ್ನು ತರಲಾಗಿದೆ. ಇದು ವಿದ್ಯಾರ್ಥಿಗಳಿಗೆ ಶಿಕ್ಷಣದ ಕಡೆಗೆ ಹೆಚ್ಚು ಗಮನಹರಿಸಲು ಸಹಕಾರಿಯಾಗಲಿದೆ. ಹಾಗಾಗಿ ಪೋಷಕರು ಈ ಬದಲಾವಣೆಗೆ ಸಹಕರಿಸಬೇಕು ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಹೆತ್ತವರು ತಮ್ಮ ಮಕ್ಕಳ ಮೇಲೆ ಅತೀವ ಪ್ರೀತಿಯನ್ನು ಹೊಂದಿದ್ದಾರೆ. ಈ ಪ್ರೀತಿಯೇ ತಮ್ಮ ಮಕ್ಕಳಿಗೆ ಕೆಲವೊಮ್ಮೆ ಮುಳುವಾಗಬಹುದು. ಆದ್ದರಿಂದ ಮಕ್ಕಳ ಪ್ರತೀ ಚಲನವಲನಗಳನ್ನು ಗಮನಿಸಬೇಕು. ಆದಷ್ಟು ಮಕ್ಕಳು ದುಶ್ಚಟಗಳಿಂದ ದೂರವಿರುವಂತೆ ನೋಡಿಕೊಳ್ಳಬೇಕೆಂದರು ಅಲ್ಲದೇ, ಮನೆಯಲ್ಲಿ ಮಕ್ಕಳು ಮೊಬೈಲ್ ಫೋನ್‍ಗಳನ್ನು ಅತಿಯಾಗಿ ಬಳಸುವುದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಪೋಷಕರು ಮಾಡಬೇಕು ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್, ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಗುಣಪಾಲ ಜೈನ್, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀನಿವಾಸ ಪೈ, ಸಂಚಾಲಕ ಎಂ.ಟಿ. ಜಯರಾಮ ಭಟ್, ಕೋಶಾಧಿಕಾರಿ ಸೇಡಿಯಾಪು ಜನಾರ್ದನ ಭಟ್, ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷ ಸೂರ್ಯನಾರಾಯಣ ರಾವ್, ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು, ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಸ್ವಾಗತಿಸಿದರು. ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಶ್ರೀಕೃಷ್ಣ ಗಣರಾಜ ಭಟ್ ಕಾರ್ಯಕ್ರಮ ನಿರೂಪಿಸಿದರು.