Recent Posts

Tuesday, January 21, 2025
ರಾಜಕೀಯ

ಸ್ಪೀಕರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ `ವಿಶ್ವೇಶ್ವರ ಹೆಗಡೆ ಕಾಗೇರಿ’ ಆಯ್ಕೆ!- ಕಹಳೆ ನ್ಯೂಸ್

ಬೆಂಗಳೂರು : ವಿಧಾನಸಭೆ ಸ್ಪೀಕರ್ ಅಭ್ಯರ್ಥಿಯಾಗಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು, ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರು ಬಿಜೆಪಿ ನೀಡಿದ್ದ ಸೂಚನೆಯಂತೆ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದರು. ಆದರೆ, ದಿಢೀರ್ ಅಭ್ಯರ್ಥಿ ಬದಲಾವಣೆಯ ನಿರ್ಧಾರ ತೆಗೆದುಕೊಂಡ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಬೆಳಗ್ಗೆ ನಾಮಪತ್ರ ಸಲ್ಲಿಸುವಂತೆ ಕಾಗೇರಿಗೆ ಸೂಚನೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚನೆ ಮೇರೆಗೆ ಶಿರಸಿ ಕ್ಷೇತ್ರದ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಬೆಳಗ್ಗೆ 11.30 ಕ್ಕೆ ಸ್ಪೀಕರ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬಿಜೆಪಿ ನಾಯಕ ಸುರೇಶ್ ಕುಮಾರ್. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೆಸರೂ ಸ್ಪೀಕರ್ ಸ್ಥಾನಕ್ಕೆ ಕೇಳಿಬಂದಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು