ಬೆಂಗಳೂರು: ವಾಣಿಜ್ಯ ಹಾಗೂ ಪ್ರಾದೇಶಿಕ ಬ್ಯಾಂಕುಗಳಿಂದ ಮೀನುಗಾರರು ಪಡೆದಿರುವ ಸಾಲವನ್ನು ಸೋಮವಾರ ನಡೆದ ನೂತನ ಸಚಿವ ಸಂಪುಟ ಸಭೆಯಲ್ಲಿ ಮನ್ನಾ ಮಾಡಲಾಗಿದೆ ಎಂದು ಮೀನುಗಾರಿಕೆ ನಿರ್ದೇಶನಾಲಯದ ನಿರ್ದೇಶಕರು ತಿಳಿಸಿದ್ದಾರೆ.
2017-18 ಮತ್ತು 2018-19 ನೇ ಸಾಲಿನಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಒಟ್ಟು 23 ಸಾವಿರದ 507 ಮೀನುಗಾರರ 60 ಕೋಟಿ 584 ಲಕ್ಷ ರೂಪಾಯಿ ಸಾಲ ವಸೂಲಾತಿಗೆ ಬಾಕಿ ಇದೆ.
ಮೀನುಗಾರರು ಹಾಗೂ ವಿಶೇಷವಾಗಿ ಮಹಿಳಾ ಮೀನುಗಾರರು, ಮೀನು ಮಾರಾಟ ಪರಿಕರಗಳ ಖರೀದಿ, ಮೀನಿನ ವ್ಯಾಪಾರಕ್ಕಾಗಿ ಬಂಡವಾಳ, ಮೀನಿನ ಸಂರಕ್ಷಣೆ ಹಾಗೂ ಮೀನಿನ ಸಾಗಾಣಿಕೆ ಇತರೆ ಮೀನುಗಾರಿಕೆ ಸಂಬಂಧಿತ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕ ನೆರವು ನೀಡುವ ದೃಷ್ಟಿಯಿಂದ ಶೇ, 2 ರಷ್ಟು ಬಡ್ಡಿದರದಲ್ಲಿ ವಾಣಿಜ್ಯ ಬ್ಯಾಂಕ್ ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಂದ ಸಾಲ ಪಡೆಯುವ ಯೋಜನೆಯನ್ನು ಮೀನುಗಾರಿಕೆ ಇಲಾಖೆ ಅನುಷ್ಠಾನಗೊಳಿಸುತ್ತಿದೆ.