ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ನ ಪೋಷಕರ ಸಭೆ ಜುಲೈ 29ರಂದು ನಡೆಯಿತು.
ಪ್ರಥಮ ವಿದ್ಯಾರ್ಥಿಗಳ ಪೋಷಕರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲ ಕೆ. ಹೇಮಲತಾ ಗೋಕುಲ್ ಮಾತನಾಡಿ, “ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸಂಸ್ಥೆಯಲ್ಲಿ ಕೆಲವೊಂದು ವಿನೂತನ ಶೈಲಿಯಲ್ಲಿ ತರಬೇತಿಗಳನ್ನು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶವನ್ನು ಗಳಿಸುವುದಕ್ಕಾಗಿ ಪೋಷಕರು ಸಂಸ್ಥೆಯ ಜೊತೆ ಸಹಕರಿಸಬೇಕು. ಜೊತೆಗೆ ವಿದ್ಯಾರ್ಥಿಗಳು ಹೆಚ್ಚಿನ ಜವಾಬ್ಧಾರಿಯನ್ನು ವಹಿಸಿ, ಉತ್ತಮ ಫಲಿತಾಂಶವನ್ನು ನೀಡಬೇಕಾಗಿದೆ” ಎಂದು ಹೇಳಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಉಪನ್ಯಾಸಕರು ವಿದ್ಯಾರ್ಥಿಗಳ ತರಗತಿಯಲ್ಲಿನ ಕಾರ್ಯಚಟುವಟಿಕೆಗಳ ಬಗ್ಗೆ ಪೂರಕ ಮಾಹಿತಿಯನ್ನು ನೀಡಿದರು. ಹಾಗೂ ಅಭ್ಯಾಸ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು.
ವೇದಿಕೆಯಲ್ಲಿ ವಿದ್ಯಾರ್ಥಿಗಳು, ಪೋಷಕರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಹಾಗೂ ಪ್ರಸಕ್ತ ವರ್ಷದಿಂದ ಸಂಸ್ಥೆಯಲ್ಲಿ ಹತ್ತನೇ ತರಗತಿಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗಾಗಿ ಅನುತ್ತೀರ್ಣಗೊಂಡ ಆಯಾ ವಿಷಯಗಳಿಗೆ ಬೆಳಗಿನಿಂದ ಸಂಜೆಯವರೆಗೆ ಪ್ರತ್ಯೇಕವಾಗಿ ವಿಶೇಷ ತರಗತಿಗಳು ನಡೆಯಲಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.