Saturday, February 1, 2025
ಸುದ್ದಿ

ಜಮ್ಮು ಕಾಶ್ಮೀರದಲ್ಲಿ ಒಂದೇ ವಾರದಲ್ಲಿ 25 ಸಾವಿರ ಸೈನಿಕರ ನಿಯೋಜನೆ – ಕಹಳೆ ನ್ಯೂಸ್

ಶ್ರೀನಗರ: ಒಂದೇ ವಾರದಲ್ಲಿ ಮತ್ತೆ ಜಮ್ಮು ಮತ್ತು ಕಾಶ್ಮೀರದಲ್ಲಿ 25 ಸಾವಿರ ಸೈನಿಕರನ್ನು ನಿಯೋಜನೆ ಮಾಡಲಾಗಿದೆ. ಒಂದು ವಾರದ ಹಿಂದಷ್ಟೇ 10 ಸಾವಿರ ಸೈನಿಕರನ್ನು ನಿಯೋಜನೆ ಮಾಡಲಾಗಿತ್ತು. ಇದೀಗ ಮತ್ತೆ 25 ಸಾವಿರ ಸೈನಿಕರನ್ನು ನಿಯೋಜಿಸಲಾಗಿದೆ.

ಹಾಗಾದರೆ ಗಡಿಯಲ್ಲಿ ಏನಾದರೂ ಆಪತ್ತು ಕಾದಿದೆಯೇ ಎನ್ನುವುದರ ಬಗ್ಗೆಯೂ ಆಲೋಚಿಸಬೇಕಿದೆ. ಆದರೆ ಇದಕ್ಕೆ ಯಾವುದೇ ಕಾರಣಗಳನ್ನು ಸೇನೆಯಾಗಲಿ, ಸರ್ಕಾರವಾಗಲಿ ನೀಡಿಲ್ಲ. ಮೂಲಗಳ ಪ್ರಕಾರ ಅಮರನಾಥ ಯಾತ್ರಾರ್ಥಿಗಳ ರಕ್ಷಣೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಆದರೂ ಇಷ್ಟೊಂದು ಸೈನಿಕರನ್ನು ಅಮರನಾಥ ಯಾತ್ರೆಗೆ ನಿಯೋಜಿಸಿದ ಉದಾಹರಣೆಗಳೇ ಇಲ್ಲ ಎಂದು ತಿಳಿದುಬಂದಿದೆ. ಇನ್ನು ಸ್ವಾತಂತ್ರ್ಯ ದಿನಾಚರಣೆಯ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾತುಗಳೂ ಕೇಳಿಬರುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು