ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಪ್ರಧಾನಮಂತ್ರಿ ಆಶಯ ಯೋಜನೆಯಾದ ಮುದ್ರಾ ಮತ್ತು ಜನಧನ್ ಯೋಜನೆಗಳು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಅನುಷ್ಠಾಗೊಂಡಿದೆ. ಇದರ ಬಗ್ಗೆ ಯೋಜನೆಯ ಪ್ರಗತಿ ವರದಿಯನ್ನು ಪ್ರಧಾನಮಂತ್ರಿ ಅವರಿಗೆ ಹಸ್ತಾಂತರಿಸಿದರು. ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಬೇಕಾಗಿರುವ, ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.
ಸಂಸದರ ಮನವಿಗೆ ಸ್ಪಂಧಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಜಿಲ್ಲೆಯ ಜನತೆಯ ಮೇಲೆ ನನಗೆ ಅಪಾರವಾದ ಪ್ರೀತಿಯಿದೆ ಎಂದು ಪ್ರತಿಕ್ರಿಯಿಸಿದರು. ಮನವಿಯ ಬಗ್ಗೆ ತಕ್ಷಣ ಅಧಿಕಾರಿಗಳ ವಿಶೇಷ ಸಭೆ ಕರೆದು ಮುಂದಿನ ದಿನಗಳಲ್ಲಿ ಈ ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸುವುದಾಗಿ ಹಾಗೂ ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಪ್ರಧಾನಮಂತ್ರಿ ತಿಳಿಸಿದರು ಹಾಗೂ ಸಂಸದರ ಕಾರ್ಯವೈಖರಿಯ ಬಗ್ಗೆ ಮೋದಿಯವರು ಅಭಿನಂದಿಸಿದರು.