ರಾಜ್ಯ ಸರ್ಕಾರಿ ನೌಕರರಿಗೆ `ಬಿಎಸ್ ವೈ’ ಸರ್ಕಾರದಿಂದ ಶಾಕಿಂಗ್ ನ್ಯೂಸ್! ನೌಕರರ ಸಾಂದರ್ಭಿಕ ರಜೆ 10ಕ್ಕೆ ಇಳಿಕೆ – ಕಹಳೆ ನ್ಯೂಸ್
ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್ ನೀಡಿದ್ದು, ಸರ್ಕಾರಿ ನೌಕರರ ಸಾಂದರ್ಭಿಕ ರಜೆಯನ್ನು 15 ದಿನಗಳಿಂದ 10 ದಿನಗಳಿಗೆ ಕಡಿತ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ಆರನೇ ವೇತನ ಆಯೋಗದ ಶಿಫಾರಸಿನಂತೆ ನಾಲ್ಕನೇ ಶನಿವಾರ ನೌಕರರಿಗೆ ರಜೆ ಘೋಷಿಸಿರುವ ಸರ್ಕಾರ, ಸಾಂದರ್ಭಿಕ ರಜೆ ಕಡಿತ ಮಾಡಲು ನಿರ್ಧರಿಸಿತ್ತು. ಅದರಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಬಿ. ಶಿವಕುಮಾರ್ ಅವರು ಜು. 27 ರಂದು ಆದೇಶ ಹೊರಡಿಸಿದ್ದಾರೆ.