Friday, January 24, 2025
ಸುದ್ದಿ

ಮಹಾರಾಷ್ಟ್ರದಲ್ಲಿ `ಮಹಾಮಳೆ’ : ಉತ್ತರ ಕರ್ನಾಟಕದ 3 ಜಿಲ್ಲೆಗಳಲ್ಲಿ ಪ್ರವಾಹ ಭೀತಿ – ಕಹಳೆ ನ್ಯೂಸ್

ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಉತ್ತರ ಕರ್ನಾಟಕದಲ್ಲಿ ಪ್ರವಾಹ ಸೃಷ್ಟಿಸಿದೆ. ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತರ ಕರ್ನಾಟಕದ ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ರಾಯಚೂರಿನಲ್ಲಿ ಪ್ರವಾಹ ಪರಿಸ್ಥಿತಿ ತಲೆದೂರಿದೆ. ನದಿ ಪಾತ್ರದ ಗ್ರಾಮಗಳು, ಜಮೀನುಗಳು ಜಲಾವೃತವಾಗಿವೆ. ಸೇತುವೆಗಳು ಮುಳುಗಡೆಯಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಾರಾಷ್ಟ್ರದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಕೊಯ್ನಾ ಡ್ಯಾಂ ಬಳಿ ಲಘು ಭೂಕಂಪನ ಸಂಭವಿಸಿದ್ದು, ಡ್ಯಾಂಗೆ ಧಕ್ಕೆಯಾದರೆ ಕರ್ನಾಟಕಕ್ಕೆ ಅಪಾಯವಾಗುತ್ತದೆ. ಏಕಾಏಕಿ ಹೆಚ್ಚುವರಿ ನೀಡು ಹರಿದರೆ ರಾಜ್ಯದಲ್ಲಿ ಪ್ರವಾಹ ಸೃಷ್ಟಿಯಾಗುತ್ತದೆ. ಹೆಚ್ಚಿನ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದ್ದು, ಚಿಕ್ಕೋಡಿ ತಾಲೂಕಿನ ನದಿಪಾತ್ರದ ಗ್ರಾಮಗಳ ಜನರಿಗೆ ಎಚ್ಚರಿಕೆ ಘೋಷಿಸಲಾಗಿದೆ.