Friday, January 24, 2025
ಸುದ್ದಿ

ಚಂದ್ರಯಾನ – 2 ; 4ನೇ ಬಾರಿ ನೌಕೆಯ ಕಕ್ಷೆ ಎತ್ತರಿಸುವ ಕಾರ್ಯ ಯಶಸ್ವಿ- ಕಹಳೆ ನ್ಯೂಸ್

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಉಡಾವಣೆ ಮಾಡಿದ ಚಂದ್ರಯಾನ-2 ನೌಕೆಯ ಕಕ್ಷೆಯನ್ನು 4ನೇ ಬಾರಿ ಎತ್ತರಿಸುವ ಕಾರ್ಯ ಯಶಸ್ವಿಯಾಗಿದ್ದು, ನಿರೀಕ್ಷೆಯಂತೆ ಎಲ್ಲವೂ ನಡೆಯುತ್ತಿರುವುದು ವಿಜ್ಞಾನಿಗಳಲ್ಲಿ ಸಂತಸ ಮೂಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶುಕ್ರವಾರ ಮಧ್ಯಾಹ್ನ ಈ ಕಾರ್ಯಾಚರಣೆ ಯಶಸ್ವಿಯಾಗಿದೆ. ಅಂತರಿಕ್ಷೆ ನೌಕೆಯಲ್ಲಿನ ಎಂಜಿನ್ ಅನ್ನು ಸಮರ್ಪಕ ರೀತಿಯಲ್ಲಿ ಚಾಲನೆ ಮಾಡಿ ಈ ಕಾರ್ಯಾಚರಣೆ ನಡೆಸಲಾಗಿದೆ. ನೌಕೆಯ ಹಾದಿಗೆ ಕಣ್ಗಾವಲು ಇಡಲಾಗಿದ್ದು, ಪರಿಶೀಲಿಸಲಾಗುತ್ತಿದೆ ಎಂಜu ಇಸ್ರೊ ಹೇಳಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಮಾರು 4 ಲಕ್ಷ ಕಿ.ಮೀ ದೂರದಲ್ಲಿರುವ ಚಂದ್ರನ ಮೇಲೆ ಲ್ಯಾಂಡರ್, ರೋವರ್ ಮತ್ತು ಆರ್ಬಿಟರ್ ಒಳಗೊಂಡ 3,850 ಕಿ.ಜಿ ತೂಕದ ಚಂದ್ರಯಾನ-2 ನೌಕೆಯನ್ನು ಚಂದ್ರನ ಮೇಲ್ಮೈ ಮೇಲೆ ಇಳಿಸಲು ಒಟ್ಟು 15 ಬಾರಿ ಎತ್ತರಿಸುವ, ಸರಿಯಾದ ದಿಕ್ಕಿನಲ್ಲಿ ಸಾಗುವಂತೆ ಸರಿಪಡಿಸುವ ಕಾರ್ಯವನ್ನು ಇಸ್ರೋ ನಡೆಸಿದೆ. ಮುಂದಿನ ಹಂತದ ಪ್ರಕ್ರಿಯೆಗಳು ಸಮರ್ಪಕವಾಗಿ ನಡೆಯುತ್ತಿದೆ ಎಂದು ಬಾಹ್ಯಾಕಾಶ ಮಾಹಿತಿ ವಿಜ್ಞಾನಿಗಳು ನೀಡಿದ್ದಾರೆ.