Thursday, January 23, 2025
ಸುದ್ದಿ

ಮತ್ತೆ ಇಳಿದ ಪೆಟ್ರೋಲ್ ಬೆಲೆ – ಕಹಳೆ ನ್ಯೂಸ್

ವಾಹನ ಸವಾರರಿಗೆ ಖುಷಿ ಸುದ್ದಿ ಸಿಕ್ಕಿದೆ. ಶನಿವಾರವೂ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಶುಕ್ರವಾರ ಪೆಟ್ರೋಲ್ ಬೆಲೆ ಲೀಟರ್ ಗೆ 11 ಪೈಸೆ ಇಳಿಕೆಯಾಗಿತ್ತು. ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 7 ಪೈಸೆ ಇಳಿಕೆ ಕಂಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 7 ಪೈಸೆ ಇಳಿಕೆ ಕಂಡ ಪೆಟ್ರೋಲ್ ಬೆಲೆ 75 ರೂಪಾಯಿ 6 ಪೈಸೆಯಾಗಿದೆ. ಡಿಸೇಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಡಿಸೇಲ್ ಬೆಲೆ ಲೀಟರ್‍ಗೆ 68 ರೂಪಾಯಿ 18 ಪೈಸೆಯಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಾಗುವ ಏರಿಳಿತ ಪೆಟ್ರೋಲ್-ಡಿಸೇಲ್ ಬೆಲೆಯನ್ನು ಅವಲಂಬಿಸಿರುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು