Tuesday, January 21, 2025
ಸುದ್ದಿ

ವಿದ್ಯುತ್ ಆಘಾತಕ್ಕೆ ಒರ್ವ ಮಹಿಳೆ ಸಾವು – ಕಹಳೆ ನ್ಯೂಸ್

ಬಂಟ್ವಾಳ: ವಿದ್ಯುತ್ ಆಘಾತಕ್ಕೆ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಎಂಬಲ್ಲಿ ಶನಿವಾರ ನಡೆದಿದೆ. ಇಲ್ಲಿನ ಜನತಾ ಗೃಹ ನಿವಾಸಿ ವಿಶ್ವನಾಥ ಬಂಗೇರ ಎಂಬವರ ಪತ್ನಿ ಗೀತಾ ಮೃತ ಪಟ್ಟಿದ್ದಾರೆ. ಇವರು ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ ತಂತಿಯ ಮೇಲೆ ಬಟ್ಟೆ ಒಣಗಲು ಹಾಕಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದೆ. ವಿದ್ಯುತ್ ಆಘಾತಕ್ಕೊಳಗಾಗಿ ಅಸ್ವಸ್ಥರಾಗಿದ್ದ ಅವರನ್ನು ತುಂಬೆ ಆಸ್ಪತ್ರೆ ಸಾಗಿಸಿದ್ದು, ಮೃತಪಟ್ಟಿರುವ ಬಗ್ಗೆ ಇಲ್ಲಿನ ವೈದ್ಯರು ದೃಢಪಡಿಸಿದರು. ಈ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು