Monday, January 20, 2025
ಸುದ್ದಿ

ವಿವಿಧ ಠಾಣೆಗೆ ವರ್ಗಾವಣೆ ಹೊಂದಿರುವ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ನಗರ ಠಾಣೆಯಲ್ಲಿ ಸೇವೆ ಸಲ್ಲಿಸಿ ಇದೀಗ ವಿವಿಧ ಠಾಣೆಗೆ ವರ್ಗಾವಣೆ ಹೊಂದಿರುವ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದ ಎಸ್.ಐ.ಅಗಿ ಸೇವೆ ಸಲ್ಲಿಸಿ ಸುಳ್ಯ ಠಾಣೆಗೆ ವರ್ಗಾವಣೆಗೊಂಡಿರುವ ಹರೀಶ್ ಸೇರಿದಂತೆ ಬೇರೆ ಬೇರೆ ಠಾಣೆಗಳಿಗೆ ವರ್ಗಾವಣೆ ಗೊಂಡಿರುವ ಸುಮಾರು 12 ಸಿಬ್ಬಂದಿಗಳನ್ನು ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಶಾಲು ಹೊದಿಸಿ ಫಲಪುಷ್ಪಗಳನ್ನು ನೀಡಿ ಗೌರವಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ವೃತ್ತ ನಿರೀಕ್ಷಕ ಟಿ. ಡಿ.ನಾಗರಾಜ್ ಅವರು ದ.ಕ.ಜಿಲ್ಲೆಯಲ್ಲಿ ಅದರಲ್ಲೂ ಬಂಟ್ವಾಳ ವೃತ್ತದಲ್ಲಿ ಕೆಲಸ ಮಾಡುವ ಪ್ರತಿ ಪೊಲೀಸ್ ಅಧಿಕಾರಿಗಳು ಬುದ್ಧಿವಂತರು ಎಂದು ಹೇಳಿದರು. ಎಂತಹ ಕಷ್ಟಕರ ಪರಿಸ್ಥಿತಿಯಲ್ಲಿಯೂ ಒತ್ತಡದ ಮಧ್ಯೆಯೂ ಎಲ್ಲವನ್ನು ನಿಭಾಯಿಸಿಕೊಂಡು ಹೋಗುವ ಅಧಿಕಾರಿ ಸಿಬ್ಬಂದಿಗಳು ಹೊರ ಜಿಲ್ಲೆಗೆ ಹೋದರು ವಿಶೇಷ ಗೌರವ ಇದೆ ಎಂದು ಅವರು ಹೇಳಿದರು.

ವರ್ಗಾವಣೆ ಮತ್ತು ನಿವೃತ್ತಿ ಎಂಬುದು ಸರಕಾರಿ ಉದ್ಯೋಗದಲ್ಲಿ ಮಾಮೂಲಿ ಆದರೆ ಅ ಸಂದರ್ಭದಲ್ಲಿನ ಸ್ನೇಹ ಮತ್ತು ಕಾರ್ಯ ವೈಖರಿ ಜೀವನದಲ್ಲಿ ಪ್ರಮುಖ ಘಟ್ಟವಾಗಿರುತ್ತದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಕೃಷ್ಣ ಕುಮಾರ್ ಪೂಂಜಾ ಹಾಗೂ ಪೊಲೀಸ್ ಇಲಾಖೆಗೆ ಕಲ್ಯಾಣ ಮಂಟಪಕ್ಕಾಗಿ ಒಂದು ಎಕರೆ ಜಮೀನು ಗುರುತಿಸಿ ರೆಕಾರ್ಡ್ ಮಾಡಲು ಸಹಕಾರ ನೀಡಿದ ಮಹಮ್ಮದ್ ನಂದಾವರ ಹಾಗೂ ಸದಾಶಿವ ಪ್ರಭು ಅವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಪರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಕೃಷ್ಣಕುಮಾರ್ ಪೂಂಜಾ, ಮಹಮ್ಮದ್ ನಂದಾವರ, ಬಂಟ್ವಾಳ ಗ್ರಾಮಾಂತರ ಠಾಣಾ ಎಸ್. ಐ.ಪ್ರಸನ್ನ, ಬಂಟ್ವಾಳ ನಗರ ಠಾಣಾ ಅಪರಾಧ ವಿಭಾಗದ ಎಸ್.ಐ.ಸುಧಾಕರ ತೋನ್ಸೆ ಪ್ರೋಬೆಸನರಿ ಎಸ್.ಐ.ಗಳಾದ ನಾಗೇಶ್, ವಿನಾಯಕ್ ಹಾಗೂ ಕಂದಾಯ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಬಂಟ್ವಾಳ ನಗರ ಠಾಣಾ ಎಸ್. ಐ.ಚಂದ್ರಶೇಖರ್ ಪ್ರಸ್ತಾವಿಕವಾಗಿ ಮಾತನಾಡಿದರು. ನಗರ ಠಾಣಾ ನಾಗರಾಜ್ ಸ್ವಾಗತಿಸಿ ನಾಗರಾಜ್ ವಂದಿಸಿದರು. ನಿವೃತ್ತ ಶಿಕ್ಷಕ ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.