Monday, January 20, 2025
ಸುದ್ದಿ

ದಕ್ಷಿಣ ಕರ್ನಾಟಕ ಭಾಗದಲ್ಲೂ ಇನ್ನೆರಡು ದಿನಗಳ ನಂತರ ಉತ್ತಮ ಮಳೆ ಸಾಧ್ಯತೆ – ಕಹಳೆ ನ್ಯೂಸ್

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಬೀಳುತ್ತಿರುವ ಭಾರೀ ಮಳೆ ಇನ್ನೂ ಮೂರು ದಿನಗಳ ಕಾಲ ಇದೇ ರೀತಿ ಮುಂದುವರೆಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿರ್ದೇಶಕ ಡಾ. ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು, ಇನ್ನೆರಡು ದಿನಗಳ ನಂತರ ದಕ್ಷಿಣ ಕರ್ನಾಟಕ ಭಾಗದಲ್ಲೂ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ಸದ್ಯಕ್ಕೆ ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿ, ದಕ್ಷಿಣ ಕರ್ನಾಟಕ ಬರ ಪರಿಸ್ಥಿತಿ ಎಂಬಂತಾಗಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ದಕ್ಷಿಣ ಒಳನಾಡಿನಲ್ಲಿ ಜೂನ್‍ನಿಂದ ಇದುವರೆಗೂ ಶೇ. 24ರಷ್ಟು ವಾಡಿಕೆಕ್ಕಿಂತ ಮಳೆ ಕೊರತೆಯಾಗಿ ಕೃಷಿ ಚಟುವಟಿಕೆಗಳಿಗೆ ಹಿನ್ನೆಡೆಯಾಗಿದೆ. ಕಾವೇರಿ ಜಲಾನಯನ ಭಾಗದಲ್ಲಿ ಕಳೆದ ವರ್ಷಕ್ಕಿಂತ ಶೇಕಡ ಅರ್ಧಕ್ಕಿಂತ ಕಡಿಮೆ ಇದೆ. ಮಳೆ ಕೊರತೆಯಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ಜಲಾಶಯದಲ್ಲಿ ಒಳ ಹರಿವು ಇಲ್ಲ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲೂ ಮುಂಗಾರು ಚುರುಕಾಗಿದ್ದು, ಹೆಚ್ಚಿನ ಮಳೆಯಾಗುವ ಮುನ್ಸೂಚನೆಗಳಿವೆ. ಬಂಗಾಳಕೊಲ್ಲಿಯಲ್ಲಿ ವಾಯಭಾರತ ಕುಸಿತ ಉಂಟಾಗುತ್ತಿದ್ದು, ಮುಂದಿನ ಮಂಗಳವಾರ ನಂತರ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ.