Tuesday, January 21, 2025
ಸುದ್ದಿ

ಹೊಸಂಗಡಿ ಕೆರೆಕಟ್ಟೆಯಲ್ಲಿ ಲಾರಿ ಪಲ್ಟಿ – ಕಹಳೆ ನ್ಯೂಸ್

ಸಿದ್ದಾಪುರ: ಶಿವಮೊಗ್ಗ- ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ಅಕ್ಕಿ ತುಂಬಿದ್ದ ಲಾರಿಯೊಂದು ಹೊಸಂಗಡಿ, ಕೆರೆಕಟ್ಟೆಯಲ್ಲಿ ಪಲ್ಟಿಯಾಗಿದ್ದು ಸಂಚಾರಕ್ಕೆ ಅಡಚಣೆಯಾಗಿದೆ.

ಮಧ್ಯಾಹ್ನ 11 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಲಾರಿಯಲ್ಲಿ ಚಾಲಕ ಮತ್ತು ನಿರ್ವಾಹಕ ಇದ್ದರು. ದಾವಣಗೆರೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಲಾರಿ ಸ್ಕಿಡ್ ಆಗಿದ್ದರಿಂದ ಮಗುಚಿ ಬಿದ್ದಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳದಲ್ಲಿ ಜನರು ಸೇರಿದ್ದು, ಲಾರಿಯನ್ನು ರಸ್ತೆಯಿಂದ ತೆರವುಗೊಳಿಸಿ, ಸಂಚಾರ ಸುಗಮಗೊಳಿಸಲು ಯತ್ನಿಸಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು