Tuesday, January 21, 2025
ರಾಜಕೀಯ

ಎಚ್.ಡಿ.ಕೆ ಕೇವಲ ಒಕ್ಕಲಿಗರಿಗೆ ಮಾತ್ರ ಕೆಲಸ ಮಾಡುತ್ತಾರೆ, ಜಗದೀಶ್ ಶೆಟ್ಟರ್ ಠೀಕೆ – ಕಹಳೆ ನ್ಯೂಸ್

ಹುಬ್ಬಳ್ಳಿ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒಂದು ಜಾತಿಗೆ ಮಾತ್ರ ಸೀಮಿತವಾಗಿ ಕೆಲಸ ಮಾಡುತ್ತಾರಾ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಲೆಳೆದಿದ್ದಾರೆ.

ಡಿಐಜಿಯಾಗಿರುವ ರವಿಕಾಂತೇಗೌಡ ಅವರನ್ನು ವರ್ಗಾವಣೆ ಮಾಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಕಿಡಿಕಾರಿದರು. ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದವರು. ಅವರು ಕೇವಲ ಒಕ್ಕಲಿಗರಿಗೆ ಮಾತ್ರ ಕೆಲಸ ಮಾಡುತ್ತಾರಾ ಎಂದು ಕುಟುಕಿದರು. ಕುಮಾರಸ್ವಾಮಿ ಅವರಿಗೆ ರವಿಕಾಂತೇಗೌಡ ಅವರ ಬಗ್ಗೆ ಯಾಕೆ ಒಲವು..? ಅವರು ಒಕ್ಕಲಿಗ ಎನ್ನುವ ಕಾರಣಕ್ಕಾ..? ಬೇರೆ ಅಧಿಕಾರಿಗಳೂ ವರ್ಗಾವಣೆಗೊಂಡಿದ್ದಾರೆ. ಅವರ ಬಗ್ಗೆ ಯಾಕೆ ಮಾತನಾಡುವುದಿಲ್ಲ ಎಂದು ವ್ಯಂಗ್ಯವಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಇದೇ ವೇಳೆ, ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಸಂಪುಟ ರಚನೆ ವಿಚಾರ ಸಿಎಂ ಅವರಿಗೆ ಬಿಟ್ಟಿದ್ದು. ಸಿಎಂ ಯಡಿಯೂರಪ್ಪ ಇನ್ನೆರಡು ದಿನದಲ್ಲಿ ದೆಹಲಿಗೆ ಧಾವಿಸಲಿದ್ದು, ವರಿಷ್ಟರ ಸಲಹೆ ಪಡೆದು ಸಚಿವ ಸಂಪುಟ ರಚನೆ ಮಾಡಲಿದ್ದಾರೆ ಎಂದರು. ತಾವು ಯಾವುದೇ ಸ್ಥಾನದ ನಿರೀಕ್ಷೆಯಲ್ಲಿಲ್ಲ. ಪಕ್ಷ ತನಗೆ ಯಾವ ಜವಾಬ್ದಾರಿ ಕೊಟ್ಟರೂ ಸಮರ್ಥವಾಗಿ ನಿಭಾಯಿಸುವುದಾಗಿ ಸ್ಪಷ್ಟಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು