Tuesday, January 21, 2025
ಸುದ್ದಿ

ದೇವೇಗೌಡರೊಂದಿಗೆ ಕುಮಾರಸ್ವಾಮಿ ಚರ್ಚೆ – ಕಹಳೆ ನ್ಯೂಸ್

ಬೆಂಗಳೂರು: ಮುಂಬರುವ ಉಪಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ, ಪಕ್ಷ ಸಂಘಟನೆ, ಪ್ರಚಲಿತ ರಾಜಕೀಯ ವಿದ್ಯಮಾನ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮಾಲೋಚನೆ ನಡೆಸಿದರು.

ಉಪಚುನಾವಣೆ ಘೋಷಣೆಯಾದರೆ ಯಾವ ಕ್ಷೇತ್ರಗಳಿಗೆ ಯಾವ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು, ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಯಾವ ತಂತ್ರ ಅನುಸರಿಸಬೇಕು ಹಾಗೂ ಪಕ್ಷ ಸಂಘಟನೆಗೆ ಕೈಗೊಳ್ಳಬೇಕಿರುವ ಕ್ರಮಗಳ ಬಗೆಯೂ ಸಮಾಲೋಚನೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶನಿವಾರಷ್ಟೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಕುಮಾರಸ್ವಾಮಿ ನಡೆಸಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಮಾತುಕತೆ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು