Thursday, November 28, 2024
ರಾಜಕೀಯ

ನೆರೆಯಿಂದ ಏನೇ ನಷ್ಟವಾದರೂ ಅದಕ್ಕೆ ಸೂಕ್ತ ಪರಿಹಾರ: ಸಿಎಂ ಯಡಿಯೂರಪ್ಪ ಹೇಳಿಕೆ – ಕಹಳೆ ನ್ಯೂಸ್

ಬಳ್ಳಾರಿ: ನೆರೆ ಹಾವಳಿಯಿಂದ ಏನೇ ನಷ್ಟವಾದರೂ ಅದಕ್ಕೆ ಸೂಕ್ತ ಪರಿಹಾರ ನೀಡಲು ಸರ್ಕಾರ ಸಿದ್ದವಾಗಿದೆ ಎಂದು ಬಿ.ಎಸ್‍ಯಡಿಯೂರಪ್ಪ ಹೇಳಿದರು.

ಆಲಮಟ್ಟಿ ಜಲಾಶಯದಿಂದ 2.11 ಲಕ್ಷ ಕ್ಯೂಸೆಕ್, ನಾರಾಯಣಪುರ ಜಲಾಶಯದಿಂದ 2.9 ಲಕ್ಷ ಕ್ಯೂಸೆಕ್ ಸೇರಿ ಒಟ್ಟು 4 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಎನ್‍ಡಿಆರ್‍ಎಫ್ ಸಹ ಕಾರ್ಯಾಚರಣೆಗೆ ಇಳಿದಿದೆ. ಕೇಂದ್ರದಿಂದಲೂ ಮಿಲಿಟರಿ ಪಡೆ ಬಂದಿದೆ. ಭಾನುವಾರ ವೀಡಿಯೋ ಕಾನ್ಫರೆನ್ಸ್ ನಡೆಸಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹಾಗಾಗಿ ನೆರೆಹಾವಳಿಯಿಂದ ಏನೇ ಸಮಸ್ಯೆ, ನಷ್ಟವಾದರೂ ಯಾವುದೇ ಪರಿಹಾರ ನೀಡಲು ಸರ್ಕಾರ ಸಿದ್ದವಾಗಿದೆ ಎಂದು ತಿಳಿಸಿದರು. ಈ ಹಿಂದೆಯೂ ನಾನು ಮುಖ್ಯಮಂತ್ರಿ ಆಗಿದ್ದಾಗ ನೆರೆಹಾವಳಿ ಸಮಸ್ಯೆಯಾಗಿತ್ತು. ಎಂದ ಸಿಎಂ ಯಡಿಯೂರಪ್ಪ, ಆಗ ಇದಕ್ಕಿಂತಲೂ ಹೆಚ್ಚು ಸಮಸ್ಯೆಯಾಗಿತ್ತು. ಅದಕ್ಕೆ ಹೋಲಿಸಿದರೆ ಈಗ ಕಡಿಮೆಯಾಗಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು