Tuesday, January 21, 2025
ಸುದ್ದಿ

ಎಮ್ಮೆಯನ್ನು ರಕ್ಷಿಸಲು ತೆರಳಿ, ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ – ಕಹಳೆ ನ್ಯೂಸ್

ಬೆಳಗಾವಿ: ತುಂಬಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ, ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದಾರೆ. ಹುಲಗಬಾಳಿ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಮಾರುತಿ ಜಾಧವ್ ನೀರು ಪಾಲಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೃಷ್ಣಾ ನದಿ ತೀರದ ಹುಲಗಬಾಳಿ ಗ್ರಾಮದ ಬಳಿ ತೋಟದ ಮನೆಯಲ್ಲಿದ್ದ ಎಮ್ಮೆಯನ್ನು ರಕ್ಷಿಸಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನೀರು ಪಾಲಾದ ಮಾರುತಿ ಜಾಧವ್ ಅವರಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ಹೇಳಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು