Wednesday, January 22, 2025
ಸುದ್ದಿ

ಮಲೆನಾಡಿನಲ್ಲಿ ಭಾರೀ ಮಳೆ: ವಿರಾಜಪೇಟೆ ತಾಲೂಕಿನ ಮಾಕುಟ್ಟ ಬಳಿ ತಡೆಗೋಡೆ ಕುಸಿತ, ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಮುಳುಗುವ ಸಾಧ್ಯತೆ- ಕಹಳೆ ನ್ಯೂಸ್

ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರೆದ್ದಿದ್ದು, ಕೊಡಗಿನ ವಿರಾಜಪೇಟೆ ತಾಲೂಕಿನ ಮಾಕುಟ್ಟ ಬಳಿ ತಡೆಗೋಡೆ ಕುಸಿದಿದೆ. ಇದರಿಂದ ಕೊಡಗಿನ ಮೂಲಕ ಹಾದು ಹೋಗುವ ಅಂತರ್ ರಾಜ್ಯ ಹೆದ್ದಾರಿ ಬಂದ್ ಆಗಿದೆ.

ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಅರ್ಧ ಭಾಗದಷ್ಟು ಹೆದ್ದಾರಿ ಕುಸಿದಿದ್ದು, ಸಂಚಾರ ಸಂಪೂರ್ಣ ಬಂದ್ ಆಗಿದೆ. ಕಳೆದ ಬಾರಿ ಕುಸಿದಿದ್ದ ಕರ್ನಾಟಕ-ಕೇರಳ ಹೆದ್ದಾರಿಯಲ್ಲಿ ಮತ್ತೆ ತಡೆಗೋಡೆ ಕುಸಿದಿರುವುದು ಆತಂಕ ಸೃಷ್ಟಿಸಿದೆ. ಇದರಿಂದ ಕೊಡಗು-ಕೇರಳಕ್ಕೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತಡೆಗೋಡೆ ಕುಸಿದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ವಾಹನ ಸಂಚಾರ ಬಂದ್ ಮಾಡಿ ಪರ್ಯಾಯ ಮಾರ್ಗಕ್ಕೆ ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳಕ್ಕೆ ತಹಶೀಲ್ದಾರ್, ಲೋಕೋಪಯೋಗಿ ಇಂಜಿನಿಯರ್ ಮತ್ತು ಇತರೆ ಅಧಿಕಾರಿಗಳು ಸೇರಿ ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿರುತ್ತಾರೆ.

ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಗೊಳಿಸಿದ ನಂತರ ರಸ್ತೆಯನ್ನು ಸಾರ್ವಜನಿಕ ಓಡಾಟಕ್ಕೆ ಮುಕ್ತಗೊಳಿಸಿ, ಶಾಶ್ವತವಾಗಿ ರಸ್ತೆಯನ್ನು ದುರಸ್ತಿಗೊಳಿಸಲು ಕ್ರಮ ವಹಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾಡಳಿತ ಕೋರಿದೆ.

ಇನ್ನೊಂದೆಡೆ ಕೃಷ್ಣಾ ನದಿಗೆ ಮತ್ತೆ ಹೆಚ್ಚುವರಿ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಗುರ್ಜಾಪುರ ಬ್ಯಾರೇಜ್ ಮುಳುಗಡೆಯಾಗುವ ಸಾಧ್ಯತೆ ಇದೆ.

ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ 2.90 ಲಕ್ಷ ಕ್ಯೂಸೆಕ್ ನೀರು ಬಿಟ್ಟಿದ್ದು, ರಾಯಚೂರಿನ ಗುರ್ಜಾಪುರದಲ್ಲಿ ನಿರ್ಮಾಣವಾಗಿರುವ ಬ್ರಿಡ್ಜ್ ಮುಳುಗಡೆ ಹಂತಕ್ಕೆ ತಲುಪಿದೆ.

ರಾಯಚೂರು ತಾಲೂಕಿನ ಗುರ್ಜಾಪುರ ಗ್ರಾಮದ ಬಳಿ ಆರ್‍ಟಿಪಿಎಸ್ ವಿದ್ಯುತ್ ಉತ್ಪಾದನೆಗೆ ನೀರು ಸಂಗ್ರಹಣೆ ಹಿನ್ನೆಲೆಯಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕೊನೆಯ ಹಂತಕ್ಕೆ ಬಂದಿದೆ.
ಇದೀಗ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆಯಿಂದ ಬ್ರಿಡ್ಜ್ ಮೇಲೆ ಮೇಲ್ಬಾಗದವರೆಗೂ ನೀರಿ ಚಿಮ್ಮುತ್ತಿದೆ. ಈಗಾಗಲೇ ಜಿಲ್ಲೆಯ ಶೀಲಹಳ್ಳಿ, ಹೂವಿನಹೆಡಗಿ ಸೇತುವೆಗಳು ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.

ಇದೀಗ ಗುರ್ಜಾಪುರ ಗ್ರಾಮ ಬಳಿರುವ ಬ್ರಿಡ್ಜ್ ಕಂ ಬ್ಯಾರೇಜ್ ಸಹ ಮುಳುಗಡೆ ಸಾಧ್ಯತೆಯಿದೆ. ಇದರಿಂದಾಗಿ ನದಿ ತೀರದ ಹೊಲ-ಗದ್ದೆಗಳಿಗೆ ನೀರು ನುಗ್ಗಿದ್ದು, ರೈತರನ್ನು ಸಂಕಷ್ಟಕ್ಕೀಡುಮಾಡಿದೆ.