ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಒಂದು ವಾರದ ಆತಂಕಕ್ಕೆ ಇಂದು ಉತ್ತರ ಸಿಗುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವಾಲಯ ಸಭೆ ಬೆಳಗ್ಗೆ 9.30ಕ್ಕೆ ನಡೆಯಲಿದ್ದು, ಪ್ರಮುಖ ನಿರ್ಧಾರಗಳು ಹೊರಬೀಳುವ ಸಾಧ್ಯತೆಗಳಿವೆ.
ಲೋಕಸಭೆ ಅಧಿವೇಶನದಲ್ಲಿ ಕೇಂದ್ರ ಈ ವಿಷಯವನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಬುಧವಾರ ಅಥವಾ ಗುರುವಾರ ನಡೆಯಬೇಕಿದ್ದ, ಕೇಂದ್ರ ಸಚಿವ ಸಂಪುಟ ಸಭೆ ಇಂದು ಸಂಸತ್ ಭವನದಲ್ಲಿ ನಡೆಯುತ್ತಿದೆ.
ಇದಕ್ಕೆ ಪೂರಕವಾಗಿಯೇ ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಗೃಹ ಕಾರ್ಯದರ್ಶಿ ಹಾಗೂ ಭದ್ರತಾ ಸಲಹೆಗಾರರೊಂದಿಗೆ ತುರ್ತು ಸಭೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಒಟ್ಟಾರೆ ಕಾಶ್ಮೀರ ಕುತೂಹಲಕ್ಕೆ ಇಂದು ತೆರೆ ಬೀಳುವ ಸಾಧ್ಯತೆ ಇದೆ.