Friday, January 24, 2025
ಸುದ್ದಿ

Breaking News : ಸಂಸದ ನಳಿನ್ ‌ಕುಮಾರ್ ಕಟೀಲ್ ಗೆ ಜಾಮೀನು ರಹಿತ ವಾರೆಂಟ್ ಜಾರಿ! – ಕಹಳೆ ನ್ಯೂಸ್

ಮಂಗಳೂರು,ಆ.05 : ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಗೈರಾದ ಹಿನ್ನೆಲೆಯಲ್ಲಿ ದ.ಕ ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ‌ಮಾಡಿದೆ.

ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ದ ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪದ ಮೇಲೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಬೆಂಗಳೂರಿನ ಸಂಸದರ ವಿರುದ್ದದ ಕ್ರಿಮಿನಲ್ ಕೇಸುಗಳ ವಿಚಾರಣೆಯ ವಿಶೇಷ ಕೋರ್ಟ್ ನಲ್ಲಿ ವಿಚಾರಣೆಯಲ್ಲಿದ್ದು, ವಿಚಾರಣೆಗೆ ಸಂಸದ ನಳಿನ್ ಗೈರಾಗಿದ್ದರು ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೀಗಾಗಿ ಸಂಸದ ನಳಿನ್ ವಿರುದ್ದ ನ್ಯಾಯಾಧೀಶ ರಾಮಚಂದ್ರ.ಡಿ.ಹುದ್ದಾರ ಅವರು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದಾರೆ‌. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು