Saturday, January 25, 2025
ಸುದ್ದಿ

ಚಾರ್ಮಾಡಿ ಘಾಟ್ ತಿರುವಿನಲ್ಲಿ ಮರ ಬಿದ್ದು ಸಂಚಾರ ಸ್ಥಗಿತ – ಕಹಳೆ ನ್ಯೂಸ್

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಾರ್ಮಾಡಿ ಘಾಟ್ ತಿರುವಿನಲ್ಲಿ ಭಾರಿ ಗಾತ್ರದ ಮರ ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ಕಿಲೋಮೀಟರ್ ವರೆಗೆ ವಾಹನಗಳು ಸಾಲುಗಟ್ಟಿ ನಿಂತಿದೆ. ಪ್ರಯಾಣಿಕರು ಪರದಾಡುವಂತ ಸ್ಥಿತಿ ಉಂಟಾಗಿದೆ.

ನೂರಾರು ಪ್ರಯಾಣಿಕರು, ವಾಹನ ಸವಾರರು ಪರದಾಡುವಂತಾಗಿದ್ದು, ಎರಡು ಗಂಟೆಯಾದರೂ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು