Saturday, January 25, 2025
ಸುದ್ದಿ

ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಚಾರ ಸ್ಥಗಿತ – ಕಹಳೆ ನ್ಯೂಸ್

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಭೂಕುಸಿತವುಂಟಾಗಿ ಪುಣೆ ಬೆಂಗಳೂರು ರಸ್ತೆ ಸಂಪರ್ಕ ಸ್ಥಗಿತವಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಮಧ್ಯಾಹ್ನದವರೆಗೂ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಂಗಳೂರಿನಿಂದ ಬೆಳಗಾವಿ ಮಾರ್ಗವಾಗಿ ಪುಣೆಗೆ ಸಂಪರ್ಕಿಸುತ್ತಿದ್ದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಭೂಕುಸಿತವುಂಟಾಗಿದ್ದು, ಬೆಳಗಾವಿಯಿಂದ ಕೊಲ್ಲಾಪುರ ಕಡೆಗೆ ಯಾರು ಪ್ರಯಾಣ ಮಾಡದಂತೆ ಉತ್ತರ ಐಜಿಪಿ ರಾಘವೇಂದ್ರ ಸುಹಾಸ್ ಮನವಿ ಮಾಡಿದ್ದಾರೆ.

ನೆರೆಯ ಮಹಾರಾಷ್ಟ್ರದಲ್ಲಿ ಕಳೆದ ಎಂಟು-ಹತ್ತು ದಿನಗಳಿಂದ ಸತತ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಪ್ರವಾಹ ಉಂಟಾಗಿದ್ದು, ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ನೀರು ಹರಿಯುತ್ತಿರುವುದರಿಂದ ಮಹಾರಾಷ್ಟ್ರದ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಕೃಷ್ಣಾ ನದಿ ಪ್ರವಾಹದ ಸಂಕಷ್ಟದ ನಡುವೆಯೇ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಆಗಸ್ಟ್ ಮೊದಲ ವಾರದ ವಾಡಿಕೆಗಿಂತ ಮೂರು ಪಟ್ಟು ಹೆಚ್ಚು ಮಳೆ ಸುರಿಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು