Recent Posts

Sunday, January 19, 2025
ಸುದ್ದಿ

ಕೇಂದ್ರ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಇನ್ನಿಲ್ಲ – ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಮಾಜಿ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ (67) ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ.

ಸುಷ್ಮಾ ಸ್ವರಾಜ್ ಅವರ ಆರೋಗ್ಯದಲ್ಲಿ ಮಂಗಳವಾರ ರಾತ್ರಿ ಏರುಪೇರು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ತಕ್ಷಣವೇ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಷ್ಮಾ ಸ್ವರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿಯ ಅನೇಕ ನಾಯಕರು ಏಮ್ಸ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು