Recent Posts

Monday, January 20, 2025
ಸುದ್ದಿ

ಭಾರೀ ಮಳೆಗೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ: ಚಿಕ್ಕಮಗಳೂರು – ದಕ್ಷಿಣ ಕನ್ನಡ ಸಂಪರ್ಕ ಕಡಿತ – ಕಹಳೆ ನ್ಯೂಸ್

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದ್ದು, ಚಿಕ್ಕಮಗಳೂರು – ದಕ್ಷಿಣ ಕನ್ನಡ ಸಂಪರ್ಕ ಕಡಿತ ಮಾಡಲಾಗಿದೆ.

ಚಾರ್ಮಾಡಿ ಘಾಟ್ ರಸ್ತೆಯ ನಾಲ್ಕೈದು ಕಡೆಗಳಲ್ಲಿ ಗುಡ್ಡ ಕುಸಿದಿದ್ದು, ಭಾರೀ ಪ್ರಮಾಣದಲ್ಲಿ ಮಣ್ಣು ರಸ್ತೆಯ ಮೇಲೆ ಬಿದ್ದಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್ ಆಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ರಸ್ತೆಯಲ್ಲಿ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಲು ಹರಸಾಹಸ ಪಡಲಾಗುತ್ತಿದೆ. ಬಣಕಲ್, ಬೆಳ್ತಂಗಡಿ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು