Recent Posts

Monday, January 20, 2025
ಸುದ್ದಿ

ಬಂಟ್ವಾಳದ ನಿವಾಸಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಬೋಳಂತೂರಿನ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಕಲ್ಪನೆ ನಿವಾಸಿ, ಅದ್ರಾಮ ಬ್ಯಾರಿ ಎಂಬವರ ಪುತ್ರ ಉಮರ್ ಫಾರೂಕ್ (35) ಮೃತಪಟ್ಟವರು.

ಫಾರೂಕ್ ಅವರು ಕಳೆದ ಹಲವಾರು ವರ್ಷಗಳಿಂದ ಬೆಂಗಳೂರಿನ ಶಿವಾಜಿನಗರದ ಕಮರ್ಶಿಯಲ್ ಸ್ಟ್ರೀಟ್‍ನಲ್ಲಿ ದುಡಿಯುತ್ತಿದ್ದರು. ಸೋಮವಾರ ಮಧ್ಯಾಹ್ನ 2.30 ಗಂಟೆ ಸುಮಾರಿಗೆ ತನ್ನ ಸ್ನೇಹಿತನೊಂದಿಗೆ ಮಾತನಾಡಿದ್ದು, ಇಲ್ಲಿ ಮಳೆಯಿರುವ ಕಾರಣ ನಾಳೆ ಊರಿಗೆ ಬರುವುದಾಗಿ ತಿಳಿಸಿದ್ದರು. ಬಳಿಕ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೃತಪಟ್ಟ ಬಗ್ಗೆ ಮಾಹಿತಿ ಲಭಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು