Wednesday, January 22, 2025
ಸುದ್ದಿ

ಫಿಲೋಮಿನಾ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದಲ್ಲಿ ಫ್ರೆಶರ್ಸ್ ಡೇ – ಕಹಳೆ ನ್ಯೂಸ್

ಪುತ್ತೂರು:  ಸಮಾಜ ಕಾರ್ಯ ವಿಷಯವನ್ನು ಸ್ನಾತಕೋತ್ತರ ಹಂತದಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಸಾಮಾಜಿಕ ಸಮಸ್ಯೆಗಳು ಮತ್ತು ಸವಾಲುಗಳನ್ನು ಪರಿಹರಿಸಲು ಪ್ರಯತ್ನಿಸಬೇಕು ಎಂದು ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ ಎಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಹೇಳಿದರು.
ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಆಶ್ರಯದಲ್ಲಿ ಆಗಸ್ಟ್ 5 ರಂದು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪಿಜಿ ಸಭಾಂಗಣದಲ್ಲಿ ಆಯೋಜಿಸಲಾದ ಫ್ರೆಶರ್ಸ್ ಡೇ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿ, ಮಾತನಾಡಿದರು. ಗ್ರಾಮೀಣ ಪ್ರದೇಶಗಳ ಜನರು ನಾನಾ ರೀತಿಯ ಕಠಿಣ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಸಮಾಜ ಕಾರ್ಯ ವಿದ್ಯಾರ್ಥಿಗಳು ತಮ್ಮ ಪಠ್ಯಾಧ್ಯಯನದೊಂದಿಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುವ ಅಗತ್ಯವಿದೆ. ಸಾಮಾಜಿಕ ಅಭಿವೃದ್ಧಿಯೊಂದಿಗೆ ದೇಶದ ಸರ್ವಾಂಗೀಣ ಪ್ರಗತಿ ಸಾಧ್ಯ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಭಾಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಮಾತನಾಡಿ, ಸಾಮಾಜಿಕ ಚಳುವಳಿಯಲ್ಲಿ ಭಾಗವಹಿಸಿದ ನೇತಾರರ ತತ್ವಾದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಮಾದರಿಯಾಗಿಟ್ಟುಕೊಳ್ಳಬೇಕು. ಸಮಾಜ ಕಾರ್ಯ ಸ್ನಾತಕೋತ್ತರ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳಿಗೆ ವೃತ್ತಿ ಬದುಕನ್ನು ರೂಪಿಸಿಕೊಳ್ಳಲು ವಿಪುಲ ಅವಕಾಶಗಳಿವೆ. ಉತ್ತಮ ಅಂಕಗಳೊಂದಿಗೆ ಅಗತ್ಯವಿರುವ ಕೌಶಲ್ಯಗಳನ್ನೂ ಸಂಪಾದಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರತಿಭಾ ಕೆ, ಶೀತಲ್ ಕುಮಾರ್ ಕೆ ವಿ, ಸಚಿನ್ ಕುಮಾರ್ ಮತ್ತು ದೀಪಿಕಾ ಎಮ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು