Monday, November 25, 2024
ಸುದ್ದಿ

ಆಶ್ಲೇಷಾ ಮಳೆ ಅಬ್ಬರ: ಜನಜೀವನ ತತ್ತರ, ಅಪಾರ ಹಾನಿ – ಕಹಳೆ ನ್ಯೂಸ್

ಪುತ್ತೂರು: ಕಳೆದ 24 ಗಂಟೆಗಳ ಅವಧಿಯಲ್ಲಿ ಸುರಿದ ವ್ಯಾಪಕ ಮಳೆಗೆ ಪುತ್ತೂರು ತಾಲೂಕಿನ ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಬಾರಿ ಆದ್ರ್ರಾ, ಪುನರ್ವಸು, ಪುಷ್ಯಾ ನಕ್ಷತ್ರಗಳಲ್ಲಿ ನಿರೀಕ್ಷಿತ ಮಳೆ ಸುರಿದಿಲ್ಲ. ಆದರೆ ಆ. 3ರಿಂದ ಆಶ್ಲೇಷಾ ನಕ್ಷತ್ರ ಆರಂಭಗೊಂಡಿದ್ದು, ಗಾಳಿ, ಗುಡುಗು ಸಹಿತ ಮಳೆಯಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಗದ್ದೆಯ ಬಳಿ ತೋಡಿನ ನೀರು ಹರಿದು ಮನೆಗಳಿಗೆ ನುಗ್ಗಿದೆ. ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿ ಹಾಗೂ ಕಾವೇರಿಕಟ್ಟೆ ಪರಿಸರದಲ್ಲೂ ಸೋಮವಾರ ರಾತ್ರಿ ಮನೆಗಳಿಗೆ ನೀರು ನುಗ್ಗಿದೆ. ಬಿದಿರು ಹಳ್ಳ ಸೋಮವಾರ ರಾತ್ರಿ ಉಕ್ಕಿ ಹರಿದು ಶ್ರೀ ಮಹಾಲಿಂಗೇಶ್ವರ ದೇವಾಲಯದ ಗದ್ದೆಯ ಪಕ್ಕದಲ್ಲಿರುವ ಮೂರು ಮನೆಗಳಿಗೆ ನೀರು ನುಗ್ಗಿ ಕೃತಕ ನೆರೆ ಉಂಟಾಗಿದೆ. ನಗರಸಭೆಯ ಅಧಿಕಾರಿಗಳು ರಾತ್ರಿಯೇ ಸ್ಥಳಕ್ಕೆ ತೆರಳಿ ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಸಂಪ್ಯದಲ್ಲಿ ರಸ್ತೆ ಬದಿ ಚರಂಡಿಯಲ್ಲಿ ನೀರು ಸರಿಯಾಗಿ ಹರಿಯದ ಕಾರಣದ ರಸ್ತೆಯಲ್ಲಿ ನೀರು ನಿಂತು ಹಲವು ಹೊತ್ತಿನ ಕಾಲ ಸಂಚಾರಕ್ಕೆ ಸಮಸ್ಯೆ ಉಂಟಾಗಿದೆ.

ಗಾಳಿ ಸಹಿತ ಮಳೆಗೆ ಮೆಸ್ಕಾಂ ಪುತ್ತೂರು ವಿಭಾಗ ವ್ಯಾಪ್ತಿಯ ಪುತ್ತೂರು, ಸುಳ್ಯ, ಕಡಬ ತಾಲೂಕು ವ್ಯಾಪ್ತಿಯಲ್ಲಿ 75ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಬೆಟ್ಟಂಪಾಡಿ ಹಾಗೂ ಗುತ್ತಿಗಾರಿನಲ್ಲಿ 2 ವಿದ್ಯುತ್ ಪರಿವರ್ತಕಗಳಿಗೆ ಹಾನಿಯಾಗಿದೆ. ಅಂದಾಜು 20 ಲಕ್ಷ ರೂ. ನಷ್ಟವಾಗಿದ್ದು, ವಿದ್ಯುತ್ ಮರುಜೋಡಣೆ ಕಾರ್ಯ ನಡೆಸಲಾಗುತ್ತಿದೆ ಎಂದು ಮೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ನರಸಿಂಹ ತಿಳಿಸಿದ್ದಾರೆ.