ಬಂಟ್ವಾಳ: ಸಾಂಕ್ರಾಮಿಕ ರೋಗಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸ್ವಚ್ಛತೆಗೆ ಹೆಚ್ಷಿನ ಆದ್ಯತೆ ನೀಡುವಂತೆ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಮಾಸಿಕ ಸಭೆಯಲ್ಲಿ ಹೇಳಿದರು.
ರೋಗಗಳು ಬಂದ ಮೇಲೆ ಎಚ್ಚೆತ್ತುಕೊಳ್ಳುವುದಕ್ಕಿಂತ ರೋಗ ಬರುವ ಮೊದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಡೆಂಗ್ಯೂ ರೋಗದ ಬಗ್ಗೆ ಜನ ಸಾಮಾನ್ಯರಿಗೆ ಹಾಗೂ ಶಾಲಾ ಮಕ್ಕಳಿಗೆ ಹೆಚ್ಚಿನ ಮಾಹಿತಿ ನೀಡುವಂತೆ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ ತಿಳಿಸಿದರು. ಹಾಗೂ ಅರಣ್ಯ ಇಲಾಖೆಯ ಹಾಗೂ ತೋಟಗಾರಿಕೆ ಇಲಾಖೆಯ ಸಸಿಗಳನ್ನು ಶೀಘ್ರವಾಗಿ ಕೃಷಿಕರಿಗೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ವೇದಿಕೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.