Recent Posts

Sunday, January 19, 2025
ಸುದ್ದಿ

ಧಾರವಾಡ: ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆ: ಆಗಸ್ಟ್ 10ರ ವರೆಗೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ – ಕಹಳೆ ನ್ಯೂಸ್

ಧಾರವಾಡ : ಜಿಲ್ಲೆಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾದ ಹಿನ್ನಲೆಯಲ್ಲಿ, ಮಹಾ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಹೀಗಾಗಿ ಮನೆಯಿಂದ ಹೊರ ಬರಲಾಗದಂತ ಪರಿಸ್ಥಿತಿ ಎದುರಾದ ಕಾರಣ, ಆಗಸ್ಟ್ 10ರ ವರೆಗೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ, ಕಾಲೇಜು, ವಿಶ್ವವಿದ್ಯಾಲಯ ಸೇರಿದಂತೆ ಮತ್ತಿತರ ಶಿಕ್ಷಣ ಸಂಸ್ಥೆಗಳಿಗೆ ಮುಂದಿನ ಮೂರು ಕಾಲಗಳ ರಜಾ ಅವಧಿಯನ್ನು ವಿಸ್ತರಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಗಸ್ಟ್ 10 ಶನಿವಾರದವರೆಗೆ ರಜೆ ಮುಂದುವರೆಯಲಿದೆ ಮಕ್ಕಳು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು