Recent Posts

Monday, January 20, 2025
ಸುದ್ದಿ

ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡದ ಎಲ್ಲಾ ಶಾಲಾ – ಕಾಲೇಜುಗಳಿಗೆ ಇಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿದ್ದಾರೆ. ಭಾರೀ ಮಳೆ ಸುರಿಯುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ಆಗಸ್ಟ್ 9ರ ವರೆಗೆ ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಮುಂದುವರೆಯಲಿದೆ. ಕಳೆದ 24 ಗಂಟೆಗಳಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಅತಿ ಹೆಚ್ಚಿನ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿದೆ. ಮುಂದಿನ 3 ದಿನಗಳ ಕಾಲ ಮೀನುಗಾರಿಕೆ ನಡೆಸದಂತೆ ಮೀನುಗಾರರಿಗೆ ಸೂಚನೆ ನೀಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು