Monday, January 20, 2025
ಸುದ್ದಿ

`ಅತೃಪ್ತ ಶಾಸಕರಿಗೆ 5 ಸ್ಟಾರ್ ಹೋಟೆಲ್ ಬುಕ್ ಮಾಡಿದವರು, ಇಂದು ಬಡ ಜನರಿಗೆ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ’ : ಬಿಜೆಪಿ ವಿರುದ್ಧ ಜೆಡಿಎಸ್ ಟ್ವೀಟ್ – ಕಹಳೆ ನ್ಯೂಸ್

ಬೆಂಗಳೂರು : ಉತ್ತರ ಕರ್ನಾಟಕದಲ್ಲಿ ಮಳೆಯ ಆರ್ಭಟಕ್ಕೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನರು ತತ್ತರಿಸಿ ಹೋಗುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ರಕ್ಷಣೆಗೆ ಬಾರದೇ ಇರುವುದು ದುರಾದೃಷ್ಟಕರ ಸಂಗತಿ ಎಂದು ಜೆಡಿಎಸ್ ಟ್ವೀಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದ್ದರು. ಆದರೆ ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು