Tuesday, January 21, 2025
ಸುದ್ದಿ

ಬೆಲೆ ಏರಿಕೆಯಲ್ಲೂ ವರಮಹಾಲಕ್ಷ್ಮಿ ಹಬ್ಬದ ಖರೀದಿ ಭರ್ಜರಿ – ಕಹಳೆ ನ್ಯೂಸ್

ವಿಜಯಪುರ: ತೀವ್ರ ಬರಗಾಲದ ನಡುವೆಯೂ ವರಮಹಾಲಕ್ಷ್ಮಿ ಹಬ್ಬದ ಸಿದ್ಧತೆಗಳಲ್ಲಿ ತೊಡಗಿಸಿಕೊಂಡಿರುವ ಜನರು, ಈ ವರ್ಷವಾದರೂ ಉತ್ತಮ ಮಳೆ, ಬೆಳೆಗಳಾಗಿ ಸಮೃದ್ಧ ಲಕ್ಷ್ಮಿ ಮನೆಗೆ ಬರಲಿ ಎಂದು ಹಣ್ಣು ಹೂ ಕಾಯಿಗಳ ಖರೀದಿಯಲ್ಲಿ ತೊಡಗಿಸಿಕೊಂಡಿದ್ದಾರೆ. ವ್ರತ ಆಚರಿಸಲು ಮಹಿಳೆಯರು ಮನೆಗಳಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮನೆಯಲ್ಲಿ ವರಮಹಾಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ ಪೂಜಿಸಲು ಮಹಿಳೆಯರು ಕಾತುರರಾಗಿದ್ದಾರೆ. ನಗರದ ರಸ್ತೆ ಬದಿಗಳಲ್ಲಿ ಇಟ್ಟುಕೊಂಡಿರುವ ಹಣ್ಣು, ಹೂವಿನ ಅಂಗಡಿಗಳಲ್ಲಿ ಖರೀದಿ ಜೋರಾಗಿದೆ. ಈ ಪೂಜೆ ಮಾಡಿದವರ ಧನ – ಧಾನ್ಯ – ಸಂಪತ್ತು ಹೆಚ್ಚುತ್ತದೆ ಎಂಬ ನಂಬಿಕೆಯಿಂದ ಹೆಚ್ಚು ಉತ್ಸಾಹದಿಂದ ಪೂಜೆಗಳನ್ನು ನೆರವೇರಿಸುತ್ತಾರೆ.

ಮನೆಯಲ್ಲಿ ವರಮಹಾಲಕ್ಷ್ಮಿ ಮೂರ್ತಿಯನ್ನಿಟ್ಟು ಸೀರೆ, ತಾಳಿ, ಬಂಗಾರದ ಆಭರಣಗಳನ್ನು ತೊಡಿಸಿ ಹೂಗಳಿಂದ ಅಲಂಕರಿಸುತ್ತಾರೆ. ನೈವೇದ್ಯ ಮಾಡಿ ಸಂಜೆ ಮುತ್ತೈದೆಯರನ್ನು ಆಮಂತ್ರಿಸಿ ಅರಿಶಿಣ, ಕುಂಕುಮ, ಹೂವು, ಹಣ್ಣು ಕೊಡುವುದರ ಮೂಲಕ ಅವರಲ್ಲಿ ಲಕ್ಷ್ಮಿ ರೂಪವನ್ನು ಕಾಣಲಾಗುತ್ತದೆ ಎಂದು ಹೇಳಿದರು. ಗೃಹಿಣಿ ಅರುಣತಿ ರುಮಲೇಶ್ ಈ ಆಚರಣೆಯ ಕುರಿತು ಮಾತನಾಡಿ, ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ನಡೆಯುವ ಈ ಹಬ್ಬದಂದು ದೇವಸ್ಥಾನಗಳಲ್ಲಿ ಸಾಮೂಹಿಕ ಪೂಜೆ ಸೇರಿ ಮನೆಗಳಲ್ಲಿಯೂ ವ್ರತ ಮಾಡಲಿಕ್ಕಾಗಿ ಸಕಲ ಸಿದ್ಧತೆಗಳು ನಡೆಯುತ್ತಿವೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಗೃಹಿಣಿ ಭಾಗ್ಯಮ್ಮ ಮಾತನಾಡಿ, ವ್ರತವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ. ವಿಷ್ಣುವಿನ ಪತ್ನಿ ಲಕ್ಷ್ಮಿ ದೇವಿಗೆ ಪೂಜೆ ಸಲ್ಲಿಸಿ ಹಣ, ಆಹಾರ, ಆರೋಗ್ಯ, ಸಂಪತ್ತು, ಸಂತಾನ, ಸುಮಂಗಲಿಯಾಗಿ ಬಾಳುವಂತೆ ಹರಸು ಎಂದು ಲಕ್ಷ್ಮಿಯಲ್ಲಿ ಹೆಣ್ಣು ಮಕ್ಕಳು ಬೇಡಿಕೊಳ್ಳುತ್ತಾರೆ. ಹಬ್ಬದ ಹಿನ್ನೆಲೆಯಲ್ಲಿ ಇಲ್ಲಿನ ಹಾಪ್‌ಕಾಮ್ಸ್ ಮಳಿಗೆಗೆ ಬಾಳೆ, ಸೀಬೆ, ಅನಾನಸ್, ಸೇಬು, ಮರಸೇಬು, ಮೂಸಂಬಿ, ಸಪೋಟ ಇತ್ಯಾದಿ ಹಣ್ಣುಗಳನ್ನು ಗ್ರಾಹಕರ ಬೇಡಿಕೆಗೆ ತಕ್ಕಂತೆ ಅಗತ್ಯ ಪ್ರಮಾಣದಲ್ಲಿ ಪೂರೈಸಲಾಗುತ್ತಿದೆ ಎಂದು ಸಿಬ್ಬಂದಿ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು