Highlights
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಕೇಂದ್ರ ಸರ್ಕಾರದಿಂದ ಮುಸ್ಲಿಮರ ಹಜ್ ಯಾತ್ರೆಗೆ ನೀಡಲಾಗುತ್ತಿದ್ದ ಸಬ್ಸಿಡಿ ರದ್ದುಗೊಳಿಸಿದೆ.
ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಕೇಂದ್ರ ಸರ್ಕಾರದಿಂದ ಮುಸ್ಲಿಮರ ಹಜ್ ಯಾತ್ರೆಗೆ ನೀಡಲಾಗುತ್ತಿದ್ದ ಸಬ್ಸಿಡಿ ರದ್ದುಗೊಳಿಸಿದೆ.
ಈ ನಿರ್ಧಾರವನ್ನು ಇಂದು ಪ್ರಕಟಿಸಿರುವ ಅಲ್ಪಸಂಖ್ಯಾತ ಖಾತೆ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ, ಅಲ್ಪಸಂಖ್ಯಾತರ ಶ್ರೇಯೋಭಿವೃದ್ದಿಯ ಒಂದು ಭಾಗವಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಹಜ್ ಸಬ್ಸಿಡಿ ರದ್ದು ನಿರ್ಧಾರವನ್ನು ಕೇಂದ್ರ ಸಮರ್ಥಿಸಿಕೊಂಡಿದ್ದು, ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದ ಅಂತ್ಯವಾಗಿದೆ ಎಂದು ಹೇಳಿದೆ.
ಹಜ್ ಸಬ್ಸಿಡಿ ಹಣ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಬಳಸಲು ನಿರ್ಧರಿಸಲಾಗಿದ್ದು, ನರೇಂದ್ರ ಮೋದಿ ಸರ್ಕಾರದ ಈ ನಿರ್ಧಾರ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಈ ವರ್ಷದ ಹಜ್ ಯಾತ್ರೆಯಿಂದಲೇ ರದ್ದತಿ ನಿರ್ಣಯ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ವರದಿ : ಕಹಳೆ ನ್ಯೂಸ್