ಐಸಿಯುನಲ್ಲಿ ಕೇಂದ್ರ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ: ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – ಕಹಳೆ ನ್ಯೂಸ್
ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ಶುಕ್ರವಾರ ಬೆಳಿಗ್ಗೆ ದಾಖಲು ಮಾಡಲಾಗಿದೆ.
ಅವರನ್ನು ಆಸ್ಪತ್ರೆಯ ಕಾರ್ಡಿಯೋಥೊರಾಸಿಕ್ ಮತ್ತು ನ್ಯೂರೋಸೈನ್ಸ್ ಕೇಂದ್ರದಲ್ಲಿ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಹೊಸ ಸರ್ಕಾರ ರಚನೆಗೂ ಮುನ್ನವೇ ಬಿಜೆಪಿಗೆ ಆಘಾತಕಾರಿ ಸುದ್ದಿ ರಾಜ್ಯಸಭೆ ಸದಸ್ಯರಾಗಿರುವ ಅರುಣ್ ಜೇಟ್ಲಿ, ಹೀಗಾಗಿ ಅವರನ್ನು ವೈದ್ಯಕೀಯ ತಪಾಸಣೆಗಾಗಿ ದಾಖಲು ಮಾಡಲಾಗಿದೆ. ಅವರನ್ನು ಐಸಿಯುದಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
66 ವರ್ಷದ ಅರುಣ್ ಜೇಟ್ಲಿ ಅವರಿಗೆ ಎಂಡೋಕ್ರಿನೋಲಾಜಿಸ್ಟ್, ನೆಪ್ರೋಲಾಜಿಸ್ಟ್ ಮತ್ತು ಕಾರ್ಡಿಯಾಲಜಿಸ್ಟ್‍ಗಳ ತಂಡವು ಚಿಕಿತ್ಸೆ ನೀಡುತ್ತಿದೆ. ಆರೋಗ್ಯ ಸಚಿವ ಹರ್ಷವರ್ಧನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.